filter: 0; fileterIntensity: 0.000000; filterMask: 0; captureOrientation: 90; shaking: 0.000000; highlight: 1; motionR: 1; algolist: 0; multi-frame: 1; brp_mask: 0; brp_del_th: 0.0000,0.0000; brp_del_sen: 0.0000,0.0000; ispap:1; papproctime: 2026:05:05 00:35:24; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (0, 0);aec_lux: 335.96716;aec_lux_index: 0;albedo: ;confidence: ;motionLevel: -1;weatherinfo: null;temperature: 36;
ಕಾರ್ಕಳ : (ಕೆ.ಎಸ್.ಆರ್.ಟಿ.ಸಿ) ಬಸ್ಗಳಲ್ಲಿ ಪ್ರಯಾಣಿಸುವ ವೇಳೆ ಟಿಕೆಟ್ ಪಡೆಯುವುದು ಕಡ್ಡಾಯವಾದ ನಿಯಮವಾಗಿದ್ದರೂ, ಕೆಲವರು ನಿರ್ಲಕ್ಷ್ಯ ತೋರಿಸುತ್ತಿರುವುದು ಕಂಡು ಬರುತ್ತಿದೆ. ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಟಿಕೆಟ್ ಚೆಕಿಂಗ್ ಇರುವುದಿಲ್ಲ ಎಂಬ ತಪ್ಪು ಕಲ್ಪನೆ ಹಲವರಲ್ಲಿ ಮನೆ ಮಾಡಿದೆ.
ಆದರೆ ಈ ಅಭಿಪ್ರಾಯವನ್ನು ತಪ್ಪು ಎಂದು ಸಾಬೀತುಪಡಿಸುವ ಘಟನೆ ಕಾರ್ಕಳದಿಂದ ಬೆಂಗಳೂರಿಗೆ ಹೊರಟ ಬಸ್ನಲ್ಲಿ ನಡೆದಿದೆ. ರಾತ್ರಿ ಸುಮಾರು 12.30ರ ಹೊತ್ತಿಗೆ ಟಿಕೆಟ್ ಚೆಕಿಂಗ್ ಇನ್ಸ್ಪೆಕ್ಟರ್ ಅಚಾನಕ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ, ರಿಸರ್ವೇಶನ್ ಸೀಟ್ಗಳನ್ನು ಬೇರೆ ಪ್ರಯಾಣಿಕರಿಗೆ ನೀಡುವಂತೆ ಮನವಿ ಮಾಡಿದವರ ಮಾತಿಗೆ ಮಣಿದ ಕಂಡಕ್ಟರ್ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ನಿಯಮ ಉಲ್ಲಂಘನೆ ಮಾಡಿದ ಪ್ರಯಾಣಿಕರು ಮತ್ತು ಸಿಬ್ಬಂದಿ ಇಬ್ಬರಿಗೂ ಎಚ್ಚರಿಕೆ ನೀಡಲಾಗಿದೆ.

ಈ ಘಟನೆ ಮೂಲಕ ಯಾವುದೇ ಸಮಯದಲ್ಲಾದರೂ ಪರಿಶೀಲನೆ ನಡೆಯಬಹುದು ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ ಪ್ರಯಾಣಿಕರು ಟಿಕೆಟ್ ಪಡೆದು ನಿಯಮಾನುಸಾರ ಪ್ರಯಾಣಿಸುವುದು ಅಗತ್ಯವಾಗಿದೆ.

ಇನ್ನೊಂದೆಡೆ, ರಾತ್ರಿ-ಹಗಲು ಎನ್ನದೆ ಕರ್ತವ್ಯ ನಿರ್ವಹಿಸುವ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರ ನಿಷ್ಠಾವಂತ ಸೇವೆಗೆ ಅಭಿನಂದನೆಗಳು ವ್ಯಕ್ತವಾಗಿವೆ.
