ಹಾಸನ: B. S. Yediyurappa ಅವರ 50 ವರ್ಷದ ಜನಸೇವೆಯ ಅಂಗವಾಗಿ ಮೇ 9, 2026ರ ಶನಿವಾರ ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯ ಮಠಾಧೀಶರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸುಮಾರು 25ಕ್ಕೂ ಹೆಚ್ಚು ಪರಮ ಪೂಜ್ಯ ಸ್ವಾಮಿಜಿಗಳಿಗೆ ಫಲ-ತಾಂಬೂಲ ನೀಡುವ ಮೂಲಕ ಆಹ್ವಾನ ಪತ್ರಿಕೆಗಳನ್ನು ವಿತರಿಸಲಾಯಿತು. ನಾಡಿನ ಸಾವಿರಾರು ಮಠಾಧೀಶರು ಹಾಗೂ ಲಕ್ಷಾಂತರ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿರುವ ಈ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯ ಸ್ವಾಮಿಜಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.
ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ ಅವರ ಮಾರ್ಗದರ್ಶನದಲ್ಲಿ, ಅಖಿಲ ವೀರಶೈವ ಲಿಂಗಾಯತ ಮಹಾಸಭಾ ಹಾಸನ ತಾಲೂಕು ಘಟಕದ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಸ್ವಾಮಿಜಿಗಳನ್ನು ಭೇಟಿ ಮಾಡಿ ಆಹ್ವಾನಿಸಿದರು.

ಜಿಲ್ಲೆಯ ವಿವಿಧ ಮಠಗಳ ಸ್ವಾಮಿಜಿಗಳು ಈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಭರವಸೆ ನೀಡಿದ್ದಾರೆ.
– ಶಿವಕುಮಾರ್ ಕಟ್ಟಾಯ
