ತುಮಕೂರು: ನಗರದ ಸಿದ್ದರಾಮೇಶ್ವರ ಬಡಾವಣೆಯ ಬಸವ ಭವನದಲ್ಲಿ ಹೆಚ್ಎಂಟಿ ಕೈಗಡಿಯಾರ ಬಸವ ಸಮಿತಿ ವತಿಯಿಂದ ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಹಾಗೂ ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳು ಅವರ 119ನೇ ಜನ್ಮದಿನದ ಅಂಗವಾಗಿ ಗುರುವಂದನಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ನಗರ ವೀರಶೈವ ಸಮಾಜದ ಅಧ್ಯಕ್ಷ ಕೋರಿ ಮಂಜಣ್ಣ, ಬಸವ ಸಮಿತಿ ಅಧ್ಯಕ್ಷ ರಾಜಶೇಖರಯ್ಯ, ಗೌರವಾಧ್ಯಕ್ಷ ಡಿ.ಆರ್. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಎನ್. ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶರಣ ರುದ್ರಮೂರ್ತಿ ಎಲೆರಾಂಪುರ ಅವರಿಂದ ವಚನ ಗಾಯನ ನಡೆಯಿತು. ಬಸವಣ್ಣನವರ ಸಂದೇಶಗಳು ಹಾಗೂ ಶಿವಕುಮಾರ ಸ್ವಾಮೀಜಿಗಳ ಸೇವಾ ಪರಂಪರೆಯನ್ನು ಸ್ಮರಿಸಿ ಭಕ್ತರು ಗೌರವ ನಮನ ಸಲ್ಲಿಸಿದರು.
– ಚಂದ್ರಚೂಡ ಕೆ.ಬಿ
