ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಚಿಕ್ಕೋಸಹಳ್ಳಿ ಗ್ರಾಮದ ಲೇಟ್ ನಂಜೇಗೌಡ (ಪಾಪೇಗೌಡ) ಅವರ ಧರ್ಮಪತ್ನಿ ಚನ್ನಮ್ಮ ನಂಜೇಗೌಡ (80) ಅವರು ವಯೋಸಹಜ ಕಾಯಿಲೆಯಿಂದ ಇಂದು ಮದ್ಯಾಹ್ನ 3ಗಂಟೆಗೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಮೃತರಿಗೆ ಪುತ್ರ ಗ್ರಾ.ಪಂ ಮಾಜಿ ಅಧ್ಯಕ್ಷ ಚಿಕ್ಕೋಸಹಳ್ಳಿ ರಮೇಶ್ ಸೇರಿದರೆ ನಾಲ್ಕು ಜನ ಗಂಡು ಇಬ್ಬರು ಹೆಣ್ಣು ಮಕ್ಕಳು ಮೊಮ್ಮಕ್ಕಳು,ಮುಮ್ಮಕ್ಕಳು ಸೇರಿದಂತೆ ಅಪಾರ ತುಂಬಿದ ಬಳಗವನ್ನು ಬಿಟ್ಟು ಅಗಲಿದ್ದಾರೆ ಮೃತರ ಅಂತ್ಯಸಂಸ್ಕಾರವು ನಾಳೆ ಬೆಳಿಗ್ಗೆ 11.ಗಂಟೆಗೆ ಸ್ವಗ್ರಾಮದಲ್ಲಿರುವ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರ ಮೂಲಗಳು ತಿಳಿಸುವೆ.
ಮೃತರ ನಿಧನಕ್ಕೆ ಶಾಸಕ ಹೆಚ್.ಟಿ ಮಂಜು,ಮಾಜಿ ಸಚಿವ ಕೆ.ಸಿ ನಾರಾಯಣಗೌಡ,ಮಾಜಿ ಶಾಸಕರಾದ ಕೆ.ಬಿ ಚಂದ್ರಶೇಖರ್, ಬಿ.ಪ್ರಕಾಶ್ ,ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್, ಮನ್ಮುಲ್ ನಿರ್ದೇಶಕರಾದ ಡಾಲು ರವಿ, ಎಂ.ಬಿ ಹರೀಶ್,ಕಾಂಗ್ರೆಸ್ ಮುಖಂಡ ವಿಜಯ್ ರಾಮೇಗೌಡ,ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಎಂ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶೀಳನೆರೆ ಅಂಬರೀಷ್,ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಬಿ.ಎಲ್ ದೇವರಾಜು,ಜಿ.ಪಂ ಮಾಜಿ ಉಪಾಧ್ಯಕ್ಷ ಪ್ರಭಾಕರ್,ಪುರಸಭಾ ಸದಸ್ಯ ರವೀಂದ್ರ ಬಾಬು, ಡಿ ಪ್ರೇಮ್ ಕುಮಾರ್,ಟಿ.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ಬಿ.ಎಂ ಕಿರಣ್,ಜೆಡಿಎಸ್ ಅಧ್ಯಕ್ಷ ಜಾನಕೀರಾಂ,ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿರ್ದೇಶಕ ಎಸ್.ಎಲ್ ಮೋಹನ್,ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕುರುಬ ಹಳ್ಳಿ ನಾಗೇಶ್,ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ, ಚಿಕ್ಕೋಸಹಳ್ಳಿ ಗ್ರಾಮಸ್ಥರು,ವಿವಿಧ ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾಹಿತಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ
