ಬಾಗೇಪಲ್ಲಿ, ಚೇಳೂರು ತಾಲ್ಲೂಕು: ಪೋಲನಾಯಕನಪಲ್ಲಿ VSSN (ವ್ಯವಸಾಯ ಸೇವಾ ಸಹಕಾರ ಸಂಘ)ದ ಅಧ್ಯಕ್ಷರಾಗಿ ಆಯ್ಕೆಯಾದ ಬೈರೆಡ್ಡಿ ಅವರು ಇಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಸುಬ್ಬಾರೆಡ್ಡಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬೈರೆಡ್ಡಿ ಅವರನ್ನು ಶಾಸಕರು ಆತ್ಮೀಯವಾಗಿ ಸ್ವಾಗತಿಸಿ, ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಶುಭಹಾರೈಸಿದರು.
ಸಂಘದ ಅಭಿವೃದ್ಧಿ ಹಾಗೂ ರೈತರಿಗೆ ಹೆಚ್ಚಿನ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಸಲಹೆ ನೀಡಿದರು.
