ಕೊರಟಗೆರೆ :- ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದ ಅಂಗವಾಗಿ ಕೊರಟಗೆರೆ ತಾಲ್ಲೂಕು ಆಡಳಿತದ ಕಂದಾಯ ಇಲಾಖೆಯಲ್ಲಿ ವಿವಿಧ ಯೋಜನೆಗಳಡಿ ಒಟ್ಟು 13,353 ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಮೂಲಕ ಹೊಸ ಮೈಲಿಗಲ್ಲು ನಿರ್ಮಿಸಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಇ–ಪೌತಿ ಆಂದೋಲನದಡಿ 8,018 ಫಲಾನುಭವಿಗಳಿಗೆ ಇ–ಪೌತಿ ಖಾತೆ ವಿತರಣೆ ಮಾಡಲಾಗಿದೆ. ಬಹುಕಾಲದಿಂದ ಬಾಕಿ ಉಳಿದಿದ್ದ ಒಟ್ಟು 273 ದರಖಾಸ್ತು ಪೋಡಿ ಪ್ರಕರಣಗಳನ್ನು ಕಾರ್ಯರೂಪಕ್ಕೆ ತಂದು ರೈತರ ಬದುಕಿಗೆ ನೆಮ್ಮದಿ ಕಲ್ಪಿಸುವಲ್ಲಿ ಕೊರಟಗೆರೆ ತಾಲ್ಲೂಕು ಆಡಳಿತ ಯಶಸ್ವಿಯಾಗಿದೆ.
ಸವಲತ್ತುಗಳಿಂದ ವಂಚಿತವಾಗಿದ್ದ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸುವ ಉದ್ದೇಶದಿಂದ 1828 ಫಲಾನುಭವಿಗಳಿಗೆ ಕಂದಾಯ ಗ್ರಾಮದ ಹಕ್ಕು ಪತ್ರಗಳನ್ನು ಇದೆ ಸಂದರ್ಭದಲ್ಲಿ ವಿತರಿಸಲಾಗಿದೆ.
ಕೊರಟಗೆರೆ ಕಂದಾಯ ಇಲಾಖೆ ಕಾರ್ಯಕ್ಕೆ ಸಿ ಎಂ ಸಿದ್ದರಾಮಯ್ಯರಿಂದ ಮೆಚ್ಚುಗೆ:-
ಕೊರಟಗೆರೆ ಕಂದಾಯ ಇಲಾಖೆಯ ಉತ್ತಮ ಕಾರ್ಯದಿಂದ ಕಂದಾಯ ಗ್ರಾಮಗಳ ಒಟ್ಟು 1828 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗಿದೆ. ಜೊತೆಗೆ ಪೋಡಿ ದುರಸ್ತಿಯಲ್ಲಿ ಒಟ್ಟು 273 ಪ್ರಕರಣಗಳನ್ನು ಯಶಸ್ವಿಯಾಗಿ ದುರಸ್ತಿ ಮಾಡಲಾಗಿದೆ.
ಇ – ಪೌತಿ ಆಂದೋಲನದ ಅಡಿಯಲ್ಲಿ ಒಟ್ಟು 8018 ಖಾತೆ ವಿತರಿಸಲಾಗಿದೆ. ಈ ಉತ್ತಮ ಕಾರ್ಯವನ್ನು ಮೆಚ್ಚಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಕೆ ಅವರನ್ನು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶವು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಜಿ ಪರಮೇಶ್ವರ್ ಮತ್ತು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಸೇರಿದಂತೆ ಹಲವು ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿದ್ದರು.
– ಶ್ರೀನಿವಾಸ್ ಕೊರಟಗೆರೆ.
