ಶ್ಲೋಕ – 49
ಮಾ ತೇ ವ್ಯಥಾ ಮಾ ಚ ವಿಮೂಢಭಾವೋ ದೃಷ್ಟ್ವಾ ರೂಪಂ ಘೋರಮೀದೃಙ್ಮಮೇದಮ್ ।
ವ್ಯಪೇತಭೀಃ ಪ್ರೀತಮನಾಃ ಪುನಸ್ತ್ವಂ ತದೇವ ಮೇ ರೂಪಮಿದಂ ಪ್ರಪಶ್ಯ ॥೪೯॥
ಮಾ ತೇ ವ್ಯಥಾ ಮಾ ಚ ವಿಮೂಢಭಾವಃ ದೃಷ್ಟ್ವಾ ರೂಪಮ್ ಘೋರಮ್ ಈದೃಕ್ ಮಮ ಇದಮ್ ।
ವ್ಯಪೇತ ಭೀಃ ಪ್ರೀತ ಮನಾಃ ಪುನಃ ತ್ವಮ್ ತತ್ ಏವ ಮೇ ರೂಪಮ್ ಇದಮ್ ಪ್ರಪಶ್ಯ –ನಡುಗಿಸುವ ನನ್ನ ಈ ಇಂಥ ರೂಪವನ್ನು ಕಂಡು ಕಳವಳಿಸಬೇಡ; ಕಂಗೆಡಬೇಡ. ಮತ್ತೆ ನೀನು ನನ್ನ ಆ ಮೊದಲ ರೂಪವನ್ನೆ ನೋಡು- ಅಂಜಿಕೆ ತೊರೆದು,ಬಗೆಯೊಳಕ್ಕರೆ ತುಂಬಿ.
ಶತ್ರು ಸಂಹಾರಕವಾದ ನನ್ನ ಈ ರೂಪವನ್ನು ಕಂಡು ಗಾಬರಿಯಾಗಬೇಡ. ನಿನ್ನೆಲ್ಲ ಭಯವನ್ನು ಬಿಟ್ಟು ನೋಡು ನಿನಗಿಷ್ಟವಾದ ನನ್ನ ಚತುರ್ಭುಜ ರೂಪವನ್ನು ಎನ್ನುತ್ತಾನೆ ಕೃಷ್ಣ.
