ಸಕಲೇಶಪುರ: ಮಾಜಿ ಪ್ರಧಾನಮಂತ್ರಿ H. D. Deve Gowda ಅವರ 94ನೇ ಹುಟ್ಟುಹಬ್ಬವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಚಂಚಲ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ನಡೆಸಲಾಗಿದ್ದು, ತಾಲ್ಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಚಂಚಲ ಕುಮಾರಸ್ವಾಮಿ ಅವರು, ದೇವೇಗೌಡರು ದೇಶದ ರಾಜಕೀಯ ಇತಿಹಾಸದಲ್ಲಿ ವಿಶಿಷ್ಟ ಛಾಪು ಮೂಡಿಸಿದ ನಾಯಕರು. ರೈತರ ಸಮಸ್ಯೆ, ಗ್ರಾಮೀಣ ಅಭಿವೃದ್ಧಿ ಹಾಗೂ ಜನಪರ ಹೋರಾಟಗಳ ಮೂಲಕ ಅವರು ಜನಮನ ಗೆದ್ದಿದ್ದಾರೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷವನ್ನು ರಾಜ್ಯ ಹಾಗೂ ಜಿಲ್ಲೆಯಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆ ಗಟ್ಟಿಗೊಳಿಸಲು ಸಂಕಲ್ಪ ಮಾಡಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಉಜ್ಮ ರುಜ್ಮಿ ಸುದರ್ಶನ್, ಜೆಡಿಎಸ್ ಮುಖಂಡರುಗಳಾದ ಸಚಿನ್ ಪ್ರಸಾದ್, ಭಾಸ್ಕರ್, ಸುದರ್ಶನ್ ಹಾಡ್ಯ, ಸುಮನ್ ಹೆತ್ತೂರು, ಗೊದ್ದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೌಶಿಕ್, ಸಕಲೇಶಪುರ ಪುರಸಭೆ ಮಾಜಿ ಅಧ್ಯಕ್ಷೆ ಜ್ಯೋತಿ ರಾಜಕುಮಾರ್, ಪುರಸಭೆ ಸದಸ್ಯ ಪ್ರಜ್ವಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
