
ಶುಭೋದಯ
ಹೊಗಳಿಕೆಯ ಮಾಲಿನ್ಯವನ್ನು ತೊಡೆದು ಹಾಕಲು ಏಕಮಾತ್ರ ಉಪಾಯ
ಕೆಲಸ ಮತ್ತು ಇನ್ನಷ್ಟು ಕೆಲಸ.
— ಆಲ್ಬರ್ಟ್ ಐನ್ ಸ್ಟೀನ್.
**********************************************************************************
1.ಗ್ರಾಮೀಣ ಭಾಗದ ಜನರಿಗೆ ಗುಡ್ನ್ಯೂಸ್: ಇ ಖಾತಾ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ
ಬೆಂಗಳೂರು : ಇ-ಖಾತಾ (E-khata) ನಿರೀಕ್ಷೆಯಲ್ಲಿ ಇದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗ್ರಾಮಾಂತರ ಪ್ರದೇಶದಲ್ಲಿ ಇ-ಖಾತೆ ನೀಡಲು ಸಂಪುಟ (cabinet) ಒಪ್ಪಿಗೆ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ವಿಧೇಯಕ ಅಂಗೀಕರಿಸಿದರೆ ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮಠಾಣಾ ವ್ಯಾಪ್ತಿಯಲ್ಲಿ ಮನೆ, ನಿವೇಶನ ಸಕ್ರಮಕ್ಕೆ ಅವಕಾಶ ನೀಡಿದಂತಾಗುತ್ತದೆ.
ರಾಜಧಾನಿ ಬೆಂಗಳೂರಿನಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಎಲ್ಲಾ ಉಪ-ನೋಂದಣಿದಾರರಿಗೆ ಆಸ್ತಿ ನೋಂದಣಿಗೆ ಇ-ಆಸ್ತಿ ಮತ್ತು ಇ-ಖಾತಾ ಸಾಫ್ಟ್ವೇರ್ ಬಳಸುವಂತೆ ಆದೇಶಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ.
**************************************************
2.ಮುಂದಿನ ತಿಂಗಳು ಪಾಕಿಸ್ತಾನದಲ್ಲಿ ಮತ್ತೊಂದು ಐಸಿಸಿ ಪಂದ್ಯಾವಳಿ; ವೇಳಾಪಟ್ಟಿ ಪ್ರಕಟ
Pakistan Hosts ICC Women’s Cricket World Cup Qualifier: ಪಾಕಿಸ್ತಾನದಲ್ಲಿ ಏಪ್ರಿಲ್ 9 ರಿಂದ 19 ರವರೆಗೆ ನಡೆಯಲಿರುವ ICC ಮಹಿಳಾ ಏಕದಿನ ವಿಶ್ವಕಪ್ ಅರ್ಹತಾ ಪಂದ್ಯಾವಳಿಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಬಾಂಗ್ಲಾದೇಶ, ಐರ್ಲೆಂಡ್, ಪಾಕಿಸ್ತಾನ, ವೆಸ್ಟ್ ಇಂಡೀಸ್, ಸ್ಕಾಟ್ಲೆಂಡ್ ಮತ್ತು ಥೈಲ್ಯಾಂಡ್ ತಂಡಗಳು ಭಾಗವಹಿಸಲಿವೆ. ಮೊದಲ ಎರಡು ಸ್ಥಾನಗಳನ್ನು ಗಳಿಸುವ ತಂಡಗಳು ಭಾರತದಲ್ಲಿ ನಡೆಯುವ ವಿಶ್ವಕಪ್ಗೆ ಅರ್ಹತೆ ಪಡೆಯುತ್ತವೆ. ಲಾಹೋರ್ನ ಎರಡು ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿವೆ.
**********************************************************************************
3.ಅಮೃತಸರ: ಸ್ವರ್ಣ ಮಂದಿರದಲ್ಲಿ ಕಬ್ಬಿಣದ ರಾಡ್ನಿಂದ ಜನರ ಮೇಲೆ ದಾಳಿ; ಐವರಿಗೆ ಗಾಯ
ಅಮೃತಸರ: ಅಮೃತಸರದ ಸ್ವರ್ಣ ಮಂದಿರ ಆವರಣದಲ್ಲಿ ಶುಕ್ರವಾರ ದುಷ್ಕರ್ಮಿಯೊಬ್ಬ ಕಬ್ಬಿಣದ ರಾಡ್ನಿಂದ ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಕನಿಷ್ಠ ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಐಸಿಯುಗೆ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಶ್ರೀ ಗುರು ರಾಮದಾಸ್ ಸರೈನಲ್ಲಿ ದುಷ್ಕರ್ಮಿಯೊಬ್ಬ ಕಬ್ಬಿಣದ ರಾಡ್ನಿಂದ ಜನರ ಮೇಲೆ ದಾಳಿ ಮಾಡಿದ್ದಾರೆ. ಮಂದಿರದ ಒಳಗೇ ದಾಳಿ ನಡೆದಿರುವುದು ಸಿಖ್ ಸಮುದಾಯದವರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
********************************************
4.ಹೋಳಿ ಆಚರಣೆ ಮೇಲೆ ಅತ್ಯಾಚಾರ ಪ್ರಕರಣದ ಕರಿನೆರಳು: ಹಂಪಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಕುಸಿತ
ಹಂಪಿ: ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ವಿದೇಶಿ ಪ್ರಜೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಮತ್ತು ಒಡಿಶಾ ಪ್ರವಾಸಿಯ ಕೊಲೆಯಿಂದಾಗಿ ಈ ಬಾರಿ ಹಂಪಿ ಹೋಳಿ ಆಚರಣೆಯ ಮೇಲೆ ಕರಿನೆರಳು ಬೀರಿದೆ. ಮಾರ್ಚ್ 15 ರಂದು ಹೋಳಿ ಆಚರಿಸಲು ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.
ಕೊಪ್ಪಳ ಘಟನೆಯ ನಂತರ, ಅನೇಕ ಪ್ರವಾಸಿಗರು, ವಿಶೇಷವಾಗಿ ವಿದೇಶಿಯರು, ಹಂಪಿಯಲ್ಲಿನ ಲಾಡ್ಜ್ಗಳು, ಹೋಂಸ್ಟೇಗಳು ಮತ್ತು ಇತರ ಪ್ರವಾಸೋದ್ಯಮ ಸಂಸ್ಥೆಗಳೊಂದಿಗೆ ತಮ್ಮ ಬುಕಿಂಗ್ಗಳನ್ನು ರದ್ದುಗೊಳಿಸಿದ್ದಾರೆ.
***********************
5.ಹಾವೇರಿ ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್: ಸಂಸದ ಬಸವರಾಜ ಬೊಮ್ಮಾಯಿ, ಮುತಾಲಿಕ್ ಆಕ್ರೋಶ
ಸ್ವಾತಿ ಬ್ಯಾಡಗಿ ಹತ್ಯೆಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಂಡಿಸಿದ್ದು, ಪ್ರೀತಿ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರೀಯವಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳೆಯರ ರಕ್ಷಣೆ ದುರ್ಬಲವಾಗಿದೆ. ಪೊಲೀಸರು ಒತ್ತಡಕ್ಕೆ ಮಣಿಯದೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ. ನೂರಕ್ಕೆ ನೂರು ಇದು ಲವ್ ಜಿಹಾದ್ ಎಂದು ಮುತಾಲಿಕ್ ಹೇಳಿದ್ದಾರೆ.