ಶ್ಲೋಕ – 54
ಭಕ್ತ್ಯಾ ತ್ವನನ್ಯಯಾ ಶಕ್ಯ ಅಹಮೇವಂವಿಧೋSರ್ಜುನ ।
ಜ್ಞಾತುಂ ದ್ರಷ್ಟುಂ ಚ ತತ್ತ್ವೇನ ಪ್ರವೇಷ್ಟುಂ ಚ ಪರಂತಪ ॥೫೪॥
ಭಕ್ತ್ಯಾ ತು ಅನನ್ಯಯಾ ಶಕ್ಯಃ ಅಹಂ ಏವಮ್ ವಿಧಃ ಅರ್ಜುನ ।
ಜ್ಞಾತುಮ್ ದ್ರಷ್ಟುಮ್ ಚ ತತ್ತ್ವೇನ ಪ್ರವೇಷ್ಟುಮ್ ಚ ಪರಂತಪ –ಅರಿಗಳನ್ನು ಸುಟ್ಟುರಿಯುವ ಅರ್ಜುನ, ನನ್ನನ್ನು ಈ ಪರಿ ಸರಿಯಾಗಿ ಅರಿಯಲು, ಅರಿತು ಕಾಣಲು, ಕಂಡು ಸೇರಲು ನನ್ನಲ್ಲೆ ನೆಲೆಗೊಂಡ ಭಕ್ತಿಯಿಂದ ಮಾತ್ರವೆ ಸಾಧ್ಯ.
ಭಗವಂತನನ್ನು ಕಾಣಲು ಇರುವ ಮೂಲ ಮಂತ್ರ ‘ಭಕ್ತಿ’. ಏಕನಿಷ್ಠೆಯಿಂದ ಭಗವಂತನನ್ನು ಅನನ್ಯವಾಗಿ ಭಕ್ತಿ ಮಾಡುವುದರಿಂದ ಆತನನ್ನು ಸೇರಲು ಸಾಧ್ಯ. ಎಲ್ಲರಿಗೂ ಮಿಗಿಲಾದ ಭಗವಂತ ಭಕ್ತ ಪರಾಧೀನ.
