ಕೊರಟಗೆರೆ:- ಮುಂಬರುವ ಬಕ್ರೀದ್ ಹಬ್ಬದ ಪ್ರಯುಕ್ತ ಕೊರಟಗೆರೆ ಪೊಲೀಸ್ ಠಾಣೆ ವತಿಯಿಂದ ಡಿವೈಎಸ್ಪಿ ಮಧುಗಿರಿ ಮಂಜುನಾಥ್ ಅವರ ನೇತೃತ್ವದಲ್ಲಿ ಮುಸ್ಲಿಂ ಮುಖಂಡರು ಹಾಗೂ ಸಮುದಾಯದ ಪ್ರಮುಖರೊಂದಿಗೆ ಶಾಂತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಹಬ್ಬವನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ಶಾಂತಿಯುತ ಹಾಗೂ ಸೌಹಾರ್ದತೆಯಿಂದ ಆಚರಿಸುವ ಕುರಿತು ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಯಿತು.
ಧಾರ್ಮಿಕ ಆಚರಣೆ ವೇಳೆ ಸಾರ್ವಜನಿಕ ಶಾಂತಿ, ಸಂಯಮ ಮತ್ತು ಪರಸ್ಪರ ಗೌರವ ಕಾಪಾಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿಪಿಐ ಪುರುಷೋತ್ತಮ್, ಪಿಎಸ್ಐ ತೀರ್ಥೇಶ್ ಉಪಸ್ಥಿತರಿದ್ದು, ಹಬ್ಬದ ಆಚರಣೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಮಾರ್ಗಸೂಚಿಗಳನ್ನು ವಿವರಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಕೊರಟಗೆರೆ ತಾಲೂಕಿನ ಹಲವು ಮುಸ್ಲಿಂ ಬಾಂಧವರು ಸರ್ಕಾರದ ನಿಯಮಾವಳಿ ಹಾಗೂ ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿಕೊಂಡು ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ಆಚರಿಸುವುದಾಗಿ ಭರವಸೆ ನೀಡಿದರು.
– ಶ್ರೀನಿವಾಸ್ ಕೊರಟಗೆರೆ.
