ತುಮಕೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ತುಮಕೂರು ಗ್ರಾಮಾಂತರ ಯೋಜನಾ ಕಛೇರಿ ವ್ಯಾಪ್ತಿಯಲ್ಲಿ ಸಿಎಸ್.ಸಿ ಮೂಲಕ ಓ.ಎಲ್.ವೈ.ಎಂ.ಪಿ.ಐ.ಎ.ಡಿ.ಪರೀಕ್ಷೆ ಕೈಗೊಂಡ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ ಕಾಮರಾಜ್ರವರು ಉದ್ಘಾಟನೆ ಮಾಡಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾತನಾಡಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಶುಭ ಹಾರೈಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ರವರು ಪ್ರಾಸ್ತವಿಕ ಮಾತುಗಳನ್ನಾಡಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ವಿಚಾರಗಳನ್ನು ಒಳಗೊಂಡ ಪರೀಕ್ಷೆಯನ್ನು ತುಮಕೂರು ಜಿಲ್ಲೆಯಲ್ಲಿ 5000 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೇಂದ್ರ ಸರ್ಕಾರದ ಈ ಕಾರ್ಯಕ್ರಮದಲ್ಲಿ ತುಮಕೂರು ತಾಲೂಕಿನ ವಿದ್ಯಾರ್ಥಿ ಮಾನ್ಯಶ್ರೀ ರ್ಯಾಂಕ್ ಪಡೆದುಕೊಂಡಿದ್ದು, ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದರು.
ತಾಲೂಕಿನ ಯೋಜನಾಧಿಕಾರಿಗಳಾದ ಸಂದೇಶ್.ಪಿ.ಬಿ, ಸಿ.ಎಸ್.ಸಿ ಕಾರ್ಯಕ್ರಮದ ಪ್ರಬಂಧಕರಾದ ಶ್ರೀನಿವಾಸ್, ಬಸವಪ್ರಸಾದ್, ಅಂಬರೀಷ್ ಉಪಸ್ಥಿತರಿದ್ದರು.
– ಚಂದ್ರಚೂಡ ಕೆ.ಬಿ.
