ಕೆ.ಆರ್.ಪೇಟೆ: ತಾಲ್ಲೂಕು ಟಿಎಪಿಸಿಎಂಎಸ್ ಸಂಸ್ಥೆಯ ನೂತನ ನಿರ್ದೇಶಕರಾಗಿ ರಾಯಸಮುದ್ರ ತಮ್ಮಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಟಿಎಪಿಸಿಎಂಎಸ್ ಸಂಸ್ಥೆಯ ಚುನಾವಣೆಯಲ್ಲಿ ಪರಿಶಿಷ್ಟ ಮೀಸಲು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿ ನಿರ್ದೇಶಕರಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದ ರಂಗನಾಥಪುರ ನಾಗರಾಜು ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ತಾಲ್ಲೂಕು ಮಾದಾರ ಮಹಾಸಭಾ ಅಧ್ಯಕ್ಷರಾದ ಆರ್.ಟಿ.ಉಮೇಶ್ ಅವರ ತಂದೆಯವರಾದ ರಾಯಸಮುದ್ರ ತಮ್ಮಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಟಿಎಪಿಸಿಎಂಎಸ್ ಸಂಸ್ಥೆಯ ಚುನಾವಣಾಧಿಕಾರಿಯಾದ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ತಿಳಿಸಿದ್ದಾರೆ.
ನೂತನ ಟಿಎಪಿಸಿಎಂಎಸ್ ನಿರ್ದೇಶಕರಾದ ರಾಯಸಮುದ್ರ ತಮ್ಮಣ್ಣ ಅವರನ್ನು ಇಂದು ನಡೆದ ಟಿಎಪಿಸಿಎಂಎಸ್ ಸಂಸ್ಥೆಯ ಆಡಳಿತ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಟಿಎಪಿಸಿಎಂಎಸ್ ಸಂಸ್ಥೆಯ ಅಧ್ಯಕ್ಷ. ಬಲದೇವ್, ಉಪಾಧ್ಯಕ್ಷ ಲತಾಮಂಜೇಗೌಡ, ನಿರ್ದೇಶಕರಾದ ಹೆಚ್.ಟಿ.ಲೋಕೇಶ್, ಎಸ್.ಎಲ್.ಮೋಹನ್, ಮಲ್ಲೇನಹಳ್ಳಿ ಮೋಹನ್, ನಾಗರಘಟ್ಟ ದಿಲೀಪ್ಕುಮಾರ್, ಎಂ.ಪಿ.ಲೋಕೇಶ್, ಬಿ.ಎಂ.ಕಿರಣ್, ಕಿಕ್ಕೇರಿ ಮಧು, ಬೊಮ್ಮೇನಹಳ್ಳಿ ಮಂಜುನಾಥ್, ವಿಜಯ್ಕುಮಾರ್, ಕಾಯಿ ಸುರೇಶ್ ಹಾಗೂ ಸಂಸ್ಥೆಯ ಕಾರ್ಯದರ್ಶಿ ಎಸ್.ಬೋರೇಗೌಡ ಮತ್ತಿತರರು ಅಭಿನಂದಿಸಿದರು.

ನೂತನ ಟಿಎಪಿಸಿಎಂಎಸ್ ನಿರ್ದೇಶಕರಾದ ರಾಯಸಮುದ್ರ ತಮ್ಮಣ್ಣ ಮಾತನಾಡಿ ನನ್ನನ್ನು ಗುರುತಿಸಿ ಪ್ರತಿಷ್ಠಿತ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಲು ಸಹಕಾರ ನೀಡಿದ ಕ್ಷೇತ್ರದ ಜನಪ್ರಿಯ ಶಾಸಕರಾದ ಹೆಚ್.ಟಿ.ಮಂಜು, ಶಾಸಕರ ಸಹೋದರ ಎಚ್.ಟಿ.ಲೋಕೇಶ್, ಟಿಎಪಿಸಿಎಂಎಸ್ ಸಂಸ್ಥೆಯ ಅಧ್ಯಕ್ಷರು-ಉಪಾಧ್ಯಕ್ಷರು ಸೇರಿದಂತೆ ಎಲ್ಲಾ ನಿರ್ದೇಶಕರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ರೈತರ ಸೇವೆಯನ್ನು ಮಾಡಲು ಶ್ರಮಿಸುತ್ತೇನೆ ಎಂದು ತಿಳಿಸಿದರು.
– ಶ್ರೀನಿವಾಸ್ ಆರ್.
