ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಡಳಿತ ಅವಧಿಯಲ್ಲಿ 12ನೇ ಶತಮಾನದ ಮಹಾನ್ ಸಮಾಜ ಸುಧಾರಕ ವಿಶ್ವಗುರು ಬಸವಣ್ಣನವರ ತತ್ವಗಳು ಹಾಗೂ ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಹಲವು ಐತಿಹಾಸಿಕ ನಿರ್ಣಯಗಳನ್ನು ಕೈಗೊಂಡಿದ್ದಾರೆ ಎಂದು ವಿಶ್ವ ವೀರಶೈವ ಲಿಂಗಾಯಿತ ಮಹಾ ವೇದಿಕೆ ರಾಜ್ಯಾಧ್ಯಕ್ಷ ಶರಣ ಎಂ.ಎನ್. ಕುಮಾರಸ್ವಾಮಿ ತಿಳಿಸಿದ್ದಾರೆ.
ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು, ಸರ್ಕಾರಿ ಕಚೇರಿಗಳಲ್ಲಿ ಬಸವೇಶ್ವರರ ಭಾವಚಿತ್ರ ಕಡ್ಡಾಯಗೊಳಿಸಿರುವುದು, ಸಾಮಾಜಿಕ ನ್ಯಾಯದ ತತ್ವಗಳನ್ನು ಪ್ರತಿಪಾದಿಸಿರುವುದು ಹಾಗೂ ಬೀದರ್ನಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿರುವುದು ಐತಿಹಾಸಿಕ ಹೆಜ್ಜೆಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೆ ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಯುಗಾಂತ್ಯವಾದ ಹಿನ್ನೆಲೆಯಲ್ಲಿ ಅವರಿಗೆ “ಶರಣು ಶರಣಾರ್ಥಿಗಳು” ಎಂದು ಗೌರವಪೂರ್ವಕ ನಮನ ಸಲ್ಲಿಸಿದರು.
“ರಾಜಕೀಯ ಏನೇ ಇರಲಿ, ಬಸವ ತತ್ವಗಳ ಅನುಷ್ಠಾನಕ್ಕಾಗಿ ಸಿದ್ದರಾಮಯ್ಯ ಅವರು ಕೈಗೊಂಡಿರುವ ಕ್ರಮಗಳು ಸದಾ ಸ್ಮರಣೀಯವಾಗಿರಲಿವೆ” ಎಂದು ಅವರು ತಿಳಿಸಿದ್ದಾರೆ.
ಶರಣು ಶರಣಾರ್ಥಿಗಳು.
– ಶರಣ ಎಂ.ಎನ್. ಕುಮಾರಸ್ವಾಮಿ
ರಾಜ್ಯಾಧ್ಯಕ್ಷರು, ವಿಶ್ವ ವೀರಶೈವ ಲಿಂಗಾಯಿತ ಮಹಾ ವೇದಿಕೆ, ಬೆಂಗಳೂರು
