ಕೊರಟಗೆರೆ:- ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಮಂಡಲದ ವಿವಿಧ ಪದಾಧಿಕಾರಿಗಳ ನೇಮಕಾತಿಯನ್ನು ನೂತನವಾಗಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್ ತಿಳಿಸಿದ್ದಾರೆ.
ಕೊರಟಗೆರೆ ಯುವ ಮೋರ್ಚಾ ಮಂಡಲ ಅಧ್ಯಕ್ಷರಾಗಿ ದಾಸರಹಳ್ಳಿ ಚೇತನ್ ಅವರನ್ನು ನೇಮಕ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಗಳಾಗಿ ಮನೋಹರ್ ಹಾಗೂ ನಯನಕುಮಾರ್, ಎಸ್ಸಿ ಮೋರ್ಚಾ ಅಧ್ಯಕ್ಷರಾಗಿ ಗಿರೀಶ್, ಪ್ರಧಾನ ಕಾರ್ಯದರ್ಶಿಗಳಾಗಿ ರಾಮನಾಯ್ಕ ಮತ್ತು ಆನಂದ್, ಎಸ್ಟಿ ಮೋರ್ಚಾ ಅಧ್ಯಕ್ಷರಾಗಿ ನಾಗರಾಜು, ಪ್ರಧಾನ ಕಾರ್ಯದರ್ಶಿಗಳಾಗಿ ಸಿದ್ದರಾಜು ಹಾಗೂ ಅಶ್ವತ್ಥಪ್ಪ, ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಲೋಕೇಶ್, ಪ್ರಧಾನ ಕಾರ್ಯದರ್ಶಿಗಳಾಗಿ ಪುನೀತ್ ಹಾಗೂ ಮಹೇಶ್ ಅವರನ್ನು ಆಯ್ಕೆ ಮಾಡಲಾಗಿದೆ.
ಇದೇ ವೇಳೆ ಮಂಡಲ ಉಪಾಧ್ಯಕ್ಷರಾಗಿ ಪ್ರದೀಪ್ ಕುಮಾರ್, ಕಾರ್ಯದರ್ಶಿಗಳಾಗಿ ಚೇತನಾರಾಧ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಕಾತ್ಯಾಯಿನಿ, ಪ್ರಧಾನ ಕಾರ್ಯದರ್ಶಿಗಳಾಗಿ ರೂಪಶ್ರೀ ಹಾಗೂ ಗೀತಾ, ರೈತ ಮೋರ್ಚಾ ಅಧ್ಯಕ್ಷರಾಗಿ ಮೋಹನ್ ಎ., ಪ್ರಧಾನ ಕಾರ್ಯದರ್ಶಿಗಳಾಗಿ ಸೂರ್ಯಪ್ರಕಾಶ್ ಹಾಗೂ ರವಿಕುಮಾರ್, ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷರಾಗಿ ಇಂದ್ರಕುಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ಭವನ್ಲಾಲ್ ಹಾಗೂ ಗೋವಿಂದ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಾಲೂಕು ಬಿಜೆಪಿ ಮೋರ್ಚಾ ಅಧ್ಯಕ್ಷ ರುದ್ರೇಶ್ ಮಾಹಿತಿ ನೀಡಿದ್ದಾರೆ.
-ಶ್ರೀನಿವಾಸ್ ಕೊರಟಗೆರೆ.
