ಚಾಮರಾಜನಗರ: ರಾಜ್ಯದ 25ನೇ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ನಗರದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.

ಬೆಂಗಳೂರಿನ ವಿಧಾನಸೌಧದಲ್ಲಿ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಸ್ವೀಕರಿಸುತ್ತಿದ್ದಂತೆ ನಗರದ ಭುವನೇಶ್ವರಿ ವೃತ್ತದಲ್ಲಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ದಿಲೀಪ್ ಕುದರ್, ತಾಲೂಕು ಅಧ್ಯಕ್ಷ ಸಿದ್ದರಾಜು ದೊಡ್ಡರಾಯಪೇಟೆ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಭಾವಚಿತ್ರ ಹಿಡಿದು ಪಟಾಕಿ ಸಿಡಿಸಿ, ಸಿಹಿಹಂಚಿ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರ ಜೈಕಾರ ಕೂಗಿ ಸಂಭ್ರಮಿಸಿದರು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘ ಜಿಲ್ಲಾಧ್ಯಕ್ಷ ದಿಲೀಪ್ ಕುದರ್, ತಾಲೂಕು ಅಧ್ಯಕ್ಷ ಸಿದ್ದರಾಜು ಮಾತನಾಡಿ, ರಾಜ್ಯದ 25ನೇ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್
ಪದಗ್ರಹಣ ಸ್ವೀಕರಿಸಿದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳಾದ ನಾವೆಲ್ಲರೂ ಪಟಾಕಿ ಸಿಡಿಸಿ, ಸಿಹಿ ಸಂಭ್ರಮಾಚರಣೆ ಮಾಡಲಾಗಿದೆ. ಇತ್ತೀಚೆಗೆ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ಕರಣಿಸಿ ಮುಂದಿನ ಮುಖ್ಯಮಂತ್ರಿ ಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಗಿತ್ತು. ಅವರ ಅಧಿಕಾರ ಅವಧಿ ಯಶಸ್ವಿಯಾಗಲಿ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸಿ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ದೇಶಕ್ಕೆ ಮಾದರಿ ಮುಖ್ಯಮಂತ್ರಿ ಆಗಲಿ ಎಂದು ಆಶಿಸಿದರು.

ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳೊಂದಿಗೆ ಅಧಿಕಾರ ಬರಲಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಗಟ್ಟಿಯಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಪ್ರಶಾಂತ್,
ಲೋಹಿತ್ ಅಪ್ಪು, ಉಮಾಪತಿ, ನವೀನ್ ಕ್ವಾಲಿಟಿ,
ಪುರುಷೋತ್ತಮ, ಶಿವಶಂಕರ್, ನವೀನ್, ಉಮ್ಮತ್ತೂರು ಚಂದ್ರು,
ಜಗದೀಶ್ ಉತ್ತುವಳ್ಳಿ, ಗೋವಿಂದ ಗೌಡ, ನಲ್ಲೂರು, ಹರೀಶ್, ಮಹೇಶ್ ಮಂಜು, ಮನೋಜ್, ನಾಗರಾಜು,ರಮೇಶ್
ಆನಂತ್ ಕುಮಾರ್, ಉಮೇಶ್, ಮಂಜು, ಮಣಿಕಂಠ ಮಾಸ್ಟರ್ಸ, ಸುನೀಲ್, ಮನೋಜ್ , ಪುಟ್ಟಸ್ವಾಮಿ, ಇಂದ್ರೇಶ್ ಇತರರು ಭಾಗವಹಿಸಿದ್ದರು.
– ಶ್ರೀ ಸಾಯಿ ಎಸ್ ಮಂಜು
