ಹಾಸನ, ಜೂನ್ 5: ವಿಶ್ವ ಪರಿಸರ ದಿನಾಚರಣೆ ಹಾಗೂ ಹಸಿರು ಹಾಸನ ಅಭಿಯಾನದ ಅಂಗವಾಗಿ ಹಾಸನ ನಗರದ ಎಸ್.ಬಿ.ಎಂ. ಕಾಲೋನಿಯ ಸತ್ತೇಕಟ್ಟೆಕೆರೆ ಸುತ್ತಮುತ್ತಲಿನ ನಿವಾಸಿಗಳು ವಿವಿಧ ರೀತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

ಉದ್ಯಾನವನ ಹಾಗೂ ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಮತ್ತು ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದ ಯಶಸ್ಸಿಗೆ ಕಾರಣಕರ್ತರಾದ ಶ್ರೀ ಸತೀಶ್ ಸರ್ ಅವರಿಗೆ ಹಾಗೂ ಗಿಡಗಳನ್ನು ಒದಗಿಸಿ ಸಹಕರಿಸಿದ ಸ್ಕೌಟ್ ಮತ್ತು ಗೈಡ್ಸ್ನ ಶ್ರೀ ಗಿರೀಶ್ ಸರ್ ಮತ್ತು ಅವರ ತಂಡಕ್ಕೆ ಕಾಲೋನಿಯ ನಿವಾಸಿಗಳು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.

“ಒಬ್ಬ ವ್ಯಕ್ತಿ ಒಂದು ಗಿಡ ನೆಟ್ಟರೆ, ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ” ಎಂಬ ಸಂದೇಶದೊಂದಿಗೆ ನಿವಾಸಿಗಳು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು. ಕಾರ್ಯಕ್ರಮದಲ್ಲಿ ಸ್ಥಳೀಯರು ಉತ್ಸಾಹದಿಂದ ಭಾಗವಹಿಸಿ ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.
