ಹಾಸನ, ಜೂ. 5: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಜೂನ್ 23 ರಂದು ನಡೆಯಲಿರುವ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮ್ಮೇಳನದ ಉದ್ಘಾಟಕರಾಗಿ ಭಾಗವಹಿಸಲು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ನೀಡಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಿದರು.
ಈ ಸಂದರ್ಭದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಗಾಂಜಿ, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮೂರ್ತಿ ಹಾಗೂ ಸದಸ್ಯ ಭುವನ್ ಉಪಸ್ಥಿತರಿದ್ದರು.
ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆಯಲಿರುವ ಜಿಲ್ಲಾ ಸಮ್ಮೇಳನದಲ್ಲಿ ಶರಣ ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ವಿಚಾರಗಳ ಕುರಿತು ಚರ್ಚೆಗಳು ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.
ವರದಿ: ಎಂ.ಎನ್. ಕುಮಾರಸ್ವಾಮಿ
