ಚನ್ನರಾಯಪಟ್ಟಣ, ಜೂ. 12: ಕರ್ನಾಟಕ ರಕ್ಷಣಾ ವೇದಿಕೆ ದಂಡಿಗನಹಳ್ಳಿ ಹೋಬಳಿ ಘಟಕದ ವತಿಯಿಂದ ಉದಯಪುರ ಹೋಬಳಿ ಕೇಂದ್ರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ 60ನೇ ವರ್ಷದ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜನ್ಮದಿನದ ಅಂಗವಾಗಿ ಉದಯಪುರ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಉದಯಪುರ ಅಂಗನವಾಡಿ ಕೇಂದ್ರದ ಆವರಣದಲ್ಲಿ 60ಕ್ಕೂ ಹೆಚ್ಚು ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು. ಇದೇ ಸಂದರ್ಭದಲ್ಲಿ ನಾರಾಯಣಗೌಡರ ಹುಟ್ಟುಹಬ್ಬದ ಸವಿನೆನಪಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯ ಹಾಗೂ ಬೆಟ್ಟದಪುರ ಗ್ರಾಮದ ಡಿ.ಎಂ. ಮಂಜು ಅವರು ಸಾವಿರಾರು ಜನರಿಗೆ ಅನ್ನದಾಸೋಹ ಏರ್ಪಡಿಸಿದರು.
ಕಾರ್ಯಕ್ರಮದಲ್ಲಿ ಕರವೇ ಚನ್ನರಾಯಪಟ್ಟಣ ತಾಲ್ಲೂಕು ಅಧ್ಯಕ್ಷ ಮಧು ಕರಡೇವು, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಗಣೇಶಗೌಡ, ಜಿಲ್ಲಾ ಉಪಾಧ್ಯಕ್ಷ ಸತೀಶ್ ಕರಡೇವು, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಬಿ.ಪಿ. ಧರ್ಮರಾಜು, ಯುವ ಘಟಕದ ತಾಲೂಕು ಅಧ್ಯಕ್ಷ ಹರೀಶ್, ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಿಣಿ, ಉಪಾಧ್ಯಕ್ಷೆ ಪ್ರೇಮಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.
ದಂಡಿಗನಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ಫಯಾಜ್ ಯು.ಎಂ., ಉಪಾಧ್ಯಕ್ಷ ಅನಿಲ್ ಕೆ. ಗೌಡ, ಪ್ರಧಾನ ಕಾರ್ಯದರ್ಶಿ ಸಿ.ಎಸ್. ದಿನೇಶ್ ಕುಮಾರ್, ಖಜಾಂಚಿ ಚಂದ್ರೇಗೌಡ, ಗೌರವಾಧ್ಯಕ್ಷ ಉಮೇಶ್ ಹಾಗೂ ಇತರ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು, ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.
– ಚಂದ್ರಚೂಡ ಕೆ.ಬಿ.
