ಕೆ.ಆರ್.ಪೇಟೆ: ಮಳವಳ್ಳಿ ಶಾಸಕ ಹಾಗೂ ದಲಿತ ಸಮುದಾಯದ ಪ್ರಶ್ನಾತೀತ ನಾಯಕ ನರೇಂದ್ರ ಸ್ವಾಮಿ ಅವರಿಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ಕೆ.ಆರ್.ಪೇಟೆ ಪುರಸಭೆ ಸದಸ್ಯ ಡಿ.ಪ್ರೇಮ್ ಕುಮಾರ್ ಒತ್ತಾಯಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಮಂಡ್ಯ ಜಿಲ್ಲೆಯಲ್ಲಿ 2023ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಏಳಕ್ಕೆ ಆರು ವಿಧಾನಸಭಾ ಕ್ಷೇತ್ರ ಗೆಲ್ಲಲು ನಮ್ಮ ನಾಯಕ ನರೇಂದ್ರ ಸ್ವಾಮಿ ಅವರೇ ಪ್ರಮುಖ ಕಾರಣ. ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆ ಮಾಡಿ, ಕಾರ್ಯಕರ್ತರ ಪಡೆ ಕಟ್ಟಿ ಪಕ್ಷವನ್ನು ಗೆಲ್ಲಿಸಿದ ಶ್ರೇಯ ಅವರಿಗೆ ಸಲ್ಲಬೇಕು” ಎಂದ ಅವರು 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ನರೇಂದ್ರ ಸ್ವಾಮಿ, ಜಿಲ್ಲೆ ದಲಿತರ ಧ್ವನಿಯಾಗಿ ಗುರುತಿಸಿಕೊಂಡಿದ್ದಾರೆ.
ವಿದ್ಯಾರ್ಥಿ ದೆಸೆಯಿಂದಲೇ ಹೋರಾಟದ ಹಾದಿ ಹಿಡಿದ ಅವರು, ಕೆಪಿಸಿಸಿ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿನ ರೂವಾರಿ ಎಂಬ ಹೆಗ್ಗಳಿಕೆ ಅವರದ್ದು.ಕಾಂಗ್ರೆಸ್ ಪಕ್ಷ ದಲಿತರನ್ನ ಮತಕ್ಕೆ ಮಾತ್ರ ಬಳಸಿಕೊಳ್ಳುತ್ತೆ ಅಷ್ಟೇ. ಚುನಾವಣೆ ಬಂದಾಗ ದಲಿತರ ಮನೆ ಬಾಗಿಲು ತಟ್ಟುತ್ತಾರೆ. ಗೆದ್ದ ಮೇಲೆ ಯಾವುದೇ ಸ್ಥಾನಮಾನ ನೀಡುತ್ತಿಲ್ಲಎಂದು ತೀವ್ರ ಬೇಸರ ವ್ಯಕ್ತಪಡಿಸಿ.ನರೇಂದ್ರ ಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಿದರೆ ದಲಿತ ಸಮುದಾಯಕ್ಕೆ ನ್ಯಾಯ ಸಿಕ್ಕಂತಾಗುತ್ತದೆ. ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವೇಗ ಸಿಗುತ್ತದೆ. ಹೈಕಮಾಂಡ್ ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕು ಎಂದು ಪ್ರೇಮ್ ಕುಮಾರ್ ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಮ್ನಯ್ಯ, ಗೋವಿಂದರಾಜು, ರಮೇಶ್, ,ಮಹೇಂದ್ರ, ಕುಲ್ಲಪ್ಪ, ಚನ್ನಕೃಷ್ಣ, ಕಳ್ಳನಕೆರೆ ಶಂಕರ್,ಪ್ರಕಾಶ್, ಬಸ್ತಿ ಕಾಗೆಪುರ ರವಿ,ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ
