ಕೊರಟಗೆರೆ:- ತಾಲ್ಲೂಕಿನ ಜಿ. ನಾಗೇನಹಳ್ಳಿ ಸಮೀಪದ ಕೆರೆಯಾಗಲಹಳ್ಳಿ ಬಳಿ ಟಾಟಾ ಏಸ್ ವಾಹನ ಮತ್ತು ಆಕ್ಟಿವಾ ಹೋಂಡಾ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಕೆರೆಯಾಗಲಹಳ್ಳಿ ಗ್ರಾಮದ ವೆಂಕಟಪ್ಪ ಅವರ ಪುತ್ರ ಸುನಿಲ್ ವಿ. ಎಂದು ಗುರುತಿಸಲಾಗಿದೆ.
ಜಿ. ನಾಗೇನಹಳ್ಳಿ ಮತ್ತು ಗೊರವನಹಳ್ಳಿ ನಡುವಿನ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ವೇಳೆ ಸುನಿಲ್ ಅವರಿಗೆ ತೀವ್ರ ರಕ್ತಸ್ರಾವವಾಗಿದ್ದು, ಅವರನ್ನು ತಕ್ಷಣ ಚಿಕಿತ್ಸೆಗಾಗಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಸಿಪಿಐ ಪುರುಷೋತ್ತಮ್ ಹಾಗೂ ಪಿಎಸ್ಐ ತೀರ್ಥೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
– ಶ್ರೀನಿವಾಸ್ ಕೊರಟಗೆರೆ.
