ಕೆ.ಆರ್.ಪೇಟೆ: ತಾಲ್ಲೂಕಿನ ತೇಗನಹಳ್ಳಿ ಗ್ರಾಮದ ರೈತ ಟಿ.ಜೆ. ನಾಗೇಶ್ (50) ಅವರು ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ಮದ್ಯಾಹ್ನ ನಡೆದಿದೆ.
ಕೃಷಿ ಚಟುವಟಿಕೆಗಾಗಿ ವಿವಿಧ ಬ್ಯಾಂಕ್ಗಳು ಹಾಗೂ ಖಾಸಗಿ ವ್ಯಕ್ತಿಗಳಿಂದ ಸುಮಾರು 10. ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದ ನಾಗೇಶ್, ಸಾಲದ ಒತ್ತಡದಿಂದ ತೀವ್ರ ಮಾನಸಿಕ ಸಂಕಷ್ಟಕ್ಕೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ರೈತ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಸರ್ಕಾರ ಕೂಡಲೇ ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ, ಸಾಲಮನ್ನಾ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಘಟನೆ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
*ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ.ಆರ್.ಪೇಟೆ*
