ಹಾಸನ, ಜೂ.18: ಡಾ. ವೀರಭದ್ರಪ್ಪ ಅವರ ಕೃತಿ ಬಿಡುಗಡೆ ಸಮಾರಂಭವು ಜುಲೈ 12, 2026ರಂದು ಹಾಸನದ ಅಧಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಪೂರ್ವಭಾವಿ ಸಭೆಯನ್ನು ಜೂನ್ 18ರಂದು ಸಂಜೆ 5 ಗಂಟೆಗೆ ಕರೆಯಲಾಗಿದೆ.
ಹಾಸನದ ಶ್ರೀ ಅಧಿಚುಂಚನಗಿರಿ ಕಲ್ಯಾಣ ಮಂಟಪದ ಗಣಪತಿ ದೇವಾಲಯದ ಬಿ.ಜಿ.ಎಸ್. ಯಾಗ ಮಂಟಪದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿಗಳ ಹಂಚಿಕೆ ಹಾಗೂ ವಿವಿಧ ಸಿದ್ಧತೆಗಳ ಕುರಿತು ಚರ್ಚೆ ನಡೆಯಲಿದೆ.
ಸ್ವಾಗತ ಸಮಿತಿಯ ಪ್ರಮುಖರಾದ ಆರ್.ಪಿ. ವೆಂಕಟೇಶ್ ಮೂರ್ತಿ, ಬಿ.ಕೆ. ಮಂಜುನಾಥ್, ಹೆಚ್.ಎಲ್. ಮಲ್ಲೇಶ್ ಗೌಡ, ರವಿನಾಕಲಗೂಡು, ಹೆಮ್ಮಿಗೆ ಮೋಹನ್ ಹಾಗೂ ಕಟ್ಟಾಯ ಶಿವಕುಮಾರ್ ಅವರು ಜಿಲ್ಲೆಯ ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾಹಿತ್ಯಾಸಕ್ತರು, ಗಣ್ಯರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಸಲಹೆ-ಸಹಕಾರ ನೀಡುವಂತೆ ಕೋರಿದ್ದಾರೆ.
– ಶಿವಕುಮಾರ್ ಕಟ್ಟಾಯ
