ತುಮಕೂರು: ತುಮಕೂರು ವೀರಶೈವ ಲಿಂಗಾಯಿತರ ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರ ಸಭೆ ಜೂನ್ 21ರ ಬೆಳಿಗ್ಗೆ 11ಕ್ಕೆ ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯ,ಜಯನಗರ ಪಶ್ಚಿಮ ಬಡಾವಣೆಯ ಕಿಡ್ಸ್ ಕಾಲೋನಿ ಸ್ಕೂಲ್ ಆವರಣದಲ್ಲಿ ಸಮಿತಿಯ ಅಧ್ಯಕ್ಷರಾದ ಎಸ್.ಆರ್.ಶಿವಶಂಕರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು,ಎಲ್ಲರೂ ಸರ್ವ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಮತ್ತು ಬೆಳಿಗ್ಗೆ 10ಕ್ಕೆ ಎಲ್ಲಾ ಸದಸ್ಯರುಗಳಿಗೆ ನುರಿತ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದ್ದು ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಎಸ್.ವೀರಪ್ಪದೇವರು ಮನವಿ ಮಾಡಿದ್ದಾರೆ.
– ಕೆ.ಬಿ.ಚಂದ್ರಚೂಡ
