ಕೊರಟಗೆರೆ :- ಒಂಟಿ ಮನೆಗೆ ಕನ್ನ ಹಾಕಿದ ಕಳ್ಳರು 400 ಗ್ರಾಂ ಚಿನ್ನ ಹಾಗೂ 7 ಕೆಜಿ ಬೆಳ್ಳಿ ಆಭರಣಗಳನ್ನ ಕಳುವು ಮಾಡಿ ಸಿನಿಮಿಯ ರೀತಿಯಲ್ಲಿ ಪರಾರಿಯಾದ ಘಟನೆ ಕೊರಟಗೆರೆ ತಾಲೂಕಿನಲ್ಲಿ ಜರುಗಿದೆ.
ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ಭಾರೀ ಕಳ್ಳತನ ನಡೆದಿದ್ದು, ಕಳ್ಳರು ಮನೆಯ ಬಾಗಿಲು ಒಡೆದು ಒಳನುಗ್ಗಿ ಸುಮಾರು 400 ಗ್ರಾಂ ಚಿನ್ನಾಭರಣ ಹಾಗೂ 7 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ,
ತುಂಬಾಡಿ ಗ್ರಾಮದ ಸೂರ್ಯನಾರಾಯಣ ಶೆಟ್ರು ಅವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, ಮನೆಯ ಮಾಲೀಕರು ವೈಯಕ್ತಿಕ ಕಾರಣಕ್ಕಾಗಿ ಹೊರಗಡೆ ತೆರಳಿದ್ದ ಸಂದರ್ಭವನ್ನು ದುಷ್ಕರ್ಮಿಗಳು ದುಷ್ಕೃತ್ಯ ಎಸಗಿದ್ದಾರೆ ಏನಾಗಿದೆ.
ಮನೆಯ ಕಾಂಪೌಂಡ್ಗೆ ಬೀಗ ಹಾಕಿರುವುದನ್ನು ಗಮನಿಸಿದ ಕಳ್ಳರು, ಬಾಗಿಲು ಒಡೆದು ಹಾಗೂ ಕಬ್ಬಿಣದ ಕಟ್ಟರ್ ಬಳಸಿ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ್ದಾರೆ.
ಬಳಿಕ ಮನೆಯಲ್ಲಿದ್ದ ಬೀರು ಮತ್ತು ಕಪಾಟುಗಳನ್ನು ಒಡೆದು ಅಮೂಲ್ಯ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಕಳ್ಳತನ ನಡೆದ ಮನೆ ಕೊರಟಗೆರೆ–ಮಧುಗಿರಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡತಿದ್ದು, ಜಾಣತನದಲ್ಲಿ ಸಾರ್ವಜನಿಕರ ಗಮನಕ್ಕೆ ಬಾರದ ರೀತಿಯಲ್ಲಿ ಚಾಣಾಕ್ಷ ತನ ತೋರಿದ್ದಾರೆ ಏನ್ನಲ್ಲಾಗಿದೆ.
ಕಳ್ಳರು ಇದೇ ರಾತ್ರಿ ಸಿಎನ್ ದುರ್ಗ ಸಮೀಪ ಮತ್ತೊಂದು ಕಳ್ಳತನಕ್ಕೆ ಯತ್ನಿಸಿದ್ದು ವಿಫಲವಾಗಿದೆ. ನಂತರ ದೊಗ್ಗನಹಳ್ಳಿ ಗ್ರಾಮದಲ್ಲಿಯೂ ಬೀಗ ಒಡೆಯಲು ಪ್ರಯತ್ನ ನಡೆಸಿದರೂ ಯಶಸ್ವಿಯಾಗಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಕೊರಟಗೆರೆ ವೃತ್ತ ನಿರೀಕ್ಷಕರಾದ ಪುರುಷೋತ್ತಮ್ ಹಾಗೂ ಪಿಎಸ್ಐ ತೀರ್ಥೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಳ್ಳರ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಲು ಬಲೆ ಬೀಸಿದ್ದಾರೆ ಎನ್ನಲಾಗಿದೆ.
-ಶ್ರೀನಿವಾಸ್ ಕೊರಟಗೆರೆ.
