ಹಾಸನ : ಜಾಗತಿಕ ಸ್ವಚ್ಛತಾ ಕಾರ್ಮಿಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಹಾಸನ ಮಹಾನಗರ ಪಾಲಿಕೆ ಆವರಣದಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಹಿರಿಯ ಪೌರಕಾರ್ಮಿಕರಾದ ಶ್ರೀಮತಿ ಪುಟ್ಟಲಕ್ಷ್ಮಿ ಹಾಗೂ ಶ್ರೀಮತಿ ಮಂಜಮ್ಮ ಅವರನ್ನು ಗೌರವಿಸಲಾಯಿತು. ಜೊತೆಗೆ ಪೌರಕಾರ್ಮಿಕರಾದ ರವಿ, ಮಂಜುನಾಥ್ ಎಚ್.ಪಿ. ಮತ್ತು ಸುನಿಲ್ ಅವರನ್ನು ಸನ್ಮಾನಿಸಿ ಅವರ ಸೇವೆಯನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಕ್ಲಬ್ ಪದಾಧಿಕಾರಿಗಳು, ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವಲ್ಲಿ ಪೌರಕಾರ್ಮಿಕರ ಕೊಡುಗೆ ಅಪಾರವಾಗಿದೆ. ಅವರ ಸೇವೆಯನ್ನು ಗುರುತಿಸಿ ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷ ರೋ. ಎಚ್.ಡಿ. ವಜ್ರಕುಮಾರ್, ಕಾರ್ಯದರ್ಶಿ ರೋ. ಕೆ.ಎಸ್. ಯೋಗೇಶ್, ಜಂಟಿ ಕಾರ್ಯದರ್ಶಿ ರೋ. ಶಶೀಂದ್ರನಾಥನ್ ಹಾಗೂ ಸದಸ್ಯ ರೋ. ರಾಜೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ರೋಟರಿ ಕ್ಲಬ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
