ಚನ್ನರಾಯಪಟ್ಟಣ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ದಂಡಿಗನಹಳ್ಳಿ ಹೋಬಳಿ ಆನೆಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ನಂಜುಂಡಸ್ವಾಮಿ ರವರು ಅವರ ಅಧ್ಯಕ್ಷೀಯ ನುಡಿಗಳನ್ನು ಮಾತನಾಡಿ ನಮ್ಮ
ಸರ್ಕಾರಿ ಶಾಲೆಗಳಲ್ಲಿ ಓದಿರುವ ಮಕ್ಕಳು ನಾನಾ ಸಾಧನೆಯನ್ನು ಮಾಡಿದ್ದು ಹಲವು ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುತ್ತಾರೆ ಅವರಂತೆ ನೀವೆಲ್ಲರೂ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ತಿಳಿಸಿದರು. ನಂತರ ಮುಖ್ಯ ಅತಿಥಿಗಳಾದ ಅಣ್ಣಪ್ಪಸ್ವಾಮಿರವರು ನಮ್ಮ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ ನಮ್ಮ ಶಾಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.
ಮುಂದುವರೆದು 8ನೇ ತರಗತಿ ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ಶಾಲೆಯ ಮಕ್ಕಳಿಂದಲೇ ರಚಿಸಲ್ಪಟ್ಟ ಚಿಗುರು ಎಂಬ ವಾರ್ಷಿಕ ಶಾಲಾ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರುಗಳು, ವಿದ್ಯಾರ್ಥಿಗಳು ಹಾಗೂ ಊರಿನ ಮುಖಂಡರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
– ಮಂಜುನಾಥ್ ಐ.ಕೆ
