ಹಾಸನ, ಜೂ.26: ಸಮಾಜ ಸೇವಕರಾದ ಡಾ. ವೈ.ಎಸ್. ವೀರಭದ್ರಪ್ಪ ಅವರ ಕೃತಿ ಬಿಡುಗಡೆ ಹಾಗೂ ಸನ್ಮಾನ ಸಮಾರಂಭವು ಜುಲೈ 12, 2026ರಂದು (ಭಾನುವಾರ) ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಹಾಸನ ಜಿಲ್ಲಾ ನಾಗರಿಕ ವೇದಿಕೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಜೂನ್ 27ರಂದು (ಶನಿವಾರ) ಸಂಜೆ 5 ಗಂಟೆಗೆ ಹಾಸನ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚಿಸಿ, ವಿವಿಧ ಸಂಘ-ಸಂಸ್ಥೆಗಳ ಸಲಹೆ ಹಾಗೂ ಸಹಕಾರವನ್ನು ಪಡೆಯಲಾಗುತ್ತದೆ. ಅಲ್ಲದೆ, ಇದೇ ಸಂದರ್ಭದಲ್ಲಿ ಕೃತಿ ಬಿಡುಗಡೆ ಹಾಗೂ ಸನ್ಮಾನ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಸಹ ವಿತರಿಸಲಾಗುತ್ತದೆ.
ಡಾ. ವೈ.ಎಸ್. ವೀರಭದ್ರಪ್ಪ ಅವರ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
