ತುಮಕೂರು, ಜೂನ್ 29: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಮತ್ತು ತುಮಕೂರು ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರು ತುಮಕೂರು ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್. ಕೆಂಪರಾಜಯ್ಯ ಹಾಗೂ ಸಂಘದ ಪದಾಧಿಕಾರಿಗಳು ಗೌರವಾನ್ವಿತ ನ್ಯಾಯಮೂರ್ತಿಗಳನ್ನು ಸನ್ಮಾನಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಜಯಂತಕುಮಾರ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಹೇಶ್, ಖಜಾಂಚಿ ಸಿಂಧು, ಕಾರ್ಯಕಾರಿ ಮಂಡಳಿ ಸದಸ್ಯರಾದ ಜಗದೀಶ್, ಸೇವಪ್ರಿಯ, ಗೋವಿಂದರಾಜು ಸೇರಿದಂತೆ ವಕೀಲರು ಹಾಗೂ ನ್ಯಾಯಾಂಗ ಅಧಿಕಾರಿಗಳು ಉಪಸ್ಥಿತರಿದ್ದರು.
-ಕೆ.ಬಿ.ಚಂದ್ರಚೂಡ
