ಚನ್ನರಾಯಪಟ್ಟಣ, ಜೂನ್ 29: ಮಕ್ಕಳ ಶಿಕ್ಷಣ ಜೀವನದ ಮೊದಲ ಹೆಜ್ಜೆಗೆ ಶುಭಾರಂಭ ಮಾಡುವ ಉದ್ದೇಶದಿಂದ ಚನ್ನರಾಯಪಟ್ಟಣದ ಶಾಲಿನಿ ಇಂಟರ್ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಪುಟಾಣಿ ಮಕ್ಕಳಿಗಾಗಿ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಪೂಜ್ಯ ಗುರುಗಳಾದ ರಾಮಣ್ಣ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಪುಟಾಣಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಶಾಲೆಯ ಕಾರ್ಯದರ್ಶಿಗಳಾದ ಸಿ.ಎನ್. ಅಶೋಕ್ ಹಾಗೂ ರಾಧಾ ಅಶೋಕ್ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಕ್ಷರಾಭ್ಯಾಸ ನೆರವೇರಿಸಿಕೊಂಡರು. ಮಕ್ಕಳ ಶಿಕ್ಷಣ ಪಯಣದ ಮೊದಲ ಹೆಜ್ಜೆಯನ್ನು ಸ್ಮರಣೀಯವಾಗಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು.

ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು.
– ಮಂಜುನಾಥ್ ಐ.ಕೆ
