ತುಮಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ನಗರದ ಶಿರಾ ಗೇಟ್ ಸರ್ಕಾರಿ ಪ್ರಾಥಮಿಕ ಉನ್ನತಿಕರಣ ಪ್ರೌಢಶಾಲೆಯ ಮಕ್ಕಳಿಗೆ ಧರ್ಮಸ್ಥಳದಿಂದ ನೇರ ಲೈವ್ ಮುಖಾಂತರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಪರಮಪೂಜ್ಯ ಡಾ||ಡಿ. ವೀರೇಂದ್ರ ಹೆಗ್ಗಡೆರವರು ವಿದ್ಯಾರ್ಥಿಗಳಿಗೆ ಆನ್ ಲೈನ್ ಮುಖಾಂತರ ಆಶೀರ್ವಚನ ನೀಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣರವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಭವಿಷ್ಯ ಭಾರತವು ನಿರ್ಮಾಣ ಮಾಡುವ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ಸದಸ್ಯರಾದ ಉಪ್ಪರಹಳ್ಳಿ ಕುಮಾರ್,ತಾಲೂಕು ಯೋಜನಾಧಿಕಾರಿಗಳಾದ ಪ್ರಭಾಕರ್ ರಾಮನಾಯಕ್, ಶಾಲೆಯ ಮುಖ್ಯ ಶಿಕ್ಷಕರಾದ ಶಿವಸ್ವಾಮಿ, ತಿಮ್ಮೇಗೌಡರು, ವಲಯ ಮೇಲ್ವಿಚಾರಕರಾದ ಲೋಕೇಶ್, ಅಂಬರೀಶ್, ಸೇವಾ ಪ್ರತಿನಿಧಿಯಾದ ದಿವ್ಯಜೋತಿರವರು ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕೆ.ಬಿ.ಚಂದ್ರಚೂಡ
