ಚನ್ನರಾಯಪಟ್ಟಣ, ಜು. 6: ಪಟ್ಟಣದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 3 ಗಂಟೆಗೆ ನವೋದಯ ವಿದ್ಯಾ ಸಂಸ್ಥೆಯಲ್ಲಿ ನಿಗದಿಯಾಗಿದ್ದ ಪೂರ್ವಭಾವಿ ಸಭೆಯನ್ನು ಮುಂದೂಡಲಾಗಿದೆ ಎಂದು ಕೆಂಪೇಗೌಡ ವೇದಿಕೆಯ ಪ್ರಮುಖ ರಾಜ್ಯಾಧ್ಯಕ್ಷ ಕಾಳೇನಹಳ್ಳಿ ಆನಂದ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯ ಮುಂದಿನ ದಿನಾಂಕವನ್ನು ಸ್ಥಳೀಯ ಶಾಸಕರೊಂದಿಗೆ ಹಾಗೂ ತಾಲೂಕಿನ ಒಕ್ಕಲಿಗರ ಸಂಘ, ರೈತ ಸಂಘ, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ನಿಗದಿಪಡಿಸಲಾಗುವುದು ಎಂದರು.
ಎಲ್ಲರಿಗೂ ಅನುಕೂಲವಾಗುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ ಅವರು, ಕೆಂಪೇಗೌಡರ ಪ್ರತಿಮೆ ನಿರ್ಮಾಣ ಕಾರ್ಯದಲ್ಲಿ ಎಲ್ಲ ಸಂಘಟನೆಗಳ ಸಹಕಾರ ಮತ್ತು ಭಾಗವಹಿಸುವಿಕೆ ಅಗತ್ಯವಾಗಿದೆ ಎಂದು ಹೇಳಿದರು.
– ಮಂಜುನಾಥ್ ಐ.ಕೆ.
