ತುಮಕೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ) ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಭೀಮಸಂದ್ರ ವಲಯದ ಮಲ್ಲಸಂದ್ರ ಗ್ರಾಮದಲ್ಲಿ ಗಿಡ ನಾಟಿ ಮತ್ತು ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ಜಯಣ್ಣ ರವರು ಉದ್ಘಾಟಿಸಿದರು.
ಮುಖ್ಯ ಶಿಕ್ಷಕರಾದ ಶ್ರೀಮತಿ ಭಾಗ್ಯ ರವರು ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀಮತಿ ಶಶಿಕಲಾ, ಕೃಷಿ ಮೇಲ್ವಿಚಾರಕ ರಾಘವೇಂದ್ರ.ಎನ್., ಸೇವಾಪ್ರತಿನಿಧಿ ಶ್ರೀಮತಿ ಪುಷ್ಪಲತಾ, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
– ಚಂದ್ರಚೂಡ ಕೆ.ಬಿ.
