ಹಾಸನ, ಜು. 8: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ವಿಜಯನಗರದ ಸುಜ್ಞಾನ ಕಲ್ಯಾಣ ಮಂಟಪದಲ್ಲಿ ನಡೆದ 14ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಹಿರಿಯ ಸಾಹಿತಿ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷ ಗೋ.ರು. ಚನ್ನಬಸಪ್ಪ ಅವರನ್ನು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಗೌರವಿಸಲಾಯಿತು.
ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್ ಹಾಗೂ ಹಾಸನ ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಅವರು ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಬೆಂಗಳೂರು ವಿಭಾಗದ ಅಧ್ಯಕ್ಷ ನಾಗರಾಜಮೂರ್ತಿ, ಕದಳಿ ಮಹಿಳಾ ವೇದಿಕೆಯ ಸಂಚಾಲಕಿ ಸುಶೀಲಾ ಸೋಮಶೇಖರ್, ಹಾಸನ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ.ಎಂ.ಎನ್.
