ಹಾಸನ, ಜು. 8 (ಆರ್ಎನ್ಪಿ): ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಜಯನಗರದ ಸುಜ್ಞಾನ ಕಲ್ಯಾಣ ಮಂಟಪದಲ್ಲಿ ನಡೆದ 14ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಹಿರಿಯ ಸಾಹಿತಿ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರಾದ ಗೋ.ರು. ಚನ್ನಬಸಪ್ಪ ಅವರಿಗೆ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮತ್ತು ಹಾಸನ ಜಿಲ್ಲಾ ಕದಳಿ ಮಹಿಳಾ ವೇದಿಕೆ ವತಿಯಿಂದ ಗೌರವ ಸಮರ್ಪಿಸಲಾಯಿತು.
ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್ ಹಾಗೂ ಹಾಸನ ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಅವರು ಚನ್ನಬಸಪ್ಪ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಬೆಂಗಳೂರು ವಿಭಾಗದ ಅಧ್ಯಕ್ಷ ನಾಗರಾಜಮೂರ್ತಿ, ಕದಳಿ ಮಹಿಳಾ ವೇದಿಕೆಯ ಸಂಚಾಲಕಿ ಸುಶೀಲಾ ಸೋಮಶೇಖರ್, ಹಾಸನ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ : ಶರಣ, ಕುಮಾರ್ ಸ್ವಾಮಿ, ರಾಮನಾಥಪುರ
