ಹಾಸನ: ರಾಷ್ಟ್ರೀಯ ಮೀನುಗಾರರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ರೈಸ್ ವತಿಯಿಂದ ಹಾಸನ ತಾಲ್ಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೀನುಗಾರರನ್ನು ಗುರುತಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮೀನುಗಾರರಾದ ರಮೇಶ್, ವಿಶ್ವನಾಥ್, ಆನಂದ, ಕುಮಾರ್ ಹಾಗೂ ಶಂಕರ್ ಮತ್ತು ಅವರ ಕುಟುಂಬದ ಸದಸ್ಯರೊಂದಿಗೆ ಕೇಕ್ ಕತ್ತರಿಸುವ ಮೂಲಕ ರಾಷ್ಟ್ರೀಯ ಮೀನುಗಾರರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮೀನುಗಾರರ ಶ್ರಮವನ್ನು ಗುರುತಿಸಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ರೈಸ್ ಅಧ್ಯಕ್ಷ ಕೆ.ಎಸ್. ಯೋಗೇಶ್, ಕಾರ್ಯದರ್ಶಿ ಬಿ.ಎಂ. ದರ್ಶನ್, ಗ್ರಾಮಸ್ಥರು ಹಾಗೂ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.
ಮೀನುಗಾರರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಆಯೋಜಿಸಿದ್ದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಎಲ್ಲರಿಗೂ ರೋಟರಿ ಕ್ಲಬ್ ಆಫ್ ಹಾಸನ್ ಸನ್ರೈಸ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
