ತುಮಕೂರು:ಜನಸಂಘದ ಕಾಲದಿಂದಲೇ ನನ್ನ ಆತ್ಮೀಯರಾಗಿದ್ದ ಬಿಜೆಪಿ ಹಿರಿಯ ನಾಯಕರು ಮಾಜಿ ಸಚಿವರಾದ ರಾಮಚಂದ್ರ ಗೌಡರವರ ನಿಧನಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ತೀವ್ರ ಸಂತಾಪ ವ್ಯಕ್ತಪಡಿಸಿ, ಸುದ್ದಿ ಕೇಳಿ ಅತ್ಯಂತ ದುಃಖವಾಯಿತು ಎಂದು ಕಂಬನಿ ಮಿಡಿದಿದ್ದಾರೆ.
ಇಂದು ಬೆಂಗಳೂರಿನ ಅವರ ಸ್ವಗೃಹಕ್ಕೆ ತೆರಳಿ ಅಂತಿಮ ದರ್ಶನ ಪಡೆದು, ಕುಟುಂಬದ ಸದಸ್ಯರಿಗೆ ಹಾಗೂ ಆತ್ಮೀಯರಿಗೆ ಸಾಂತ್ವನ ತಿಳಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಅವರ ಸರಳತೆ, ಸಂಘಟನಾ ನಿಷ್ಠೆ ಹಾಗೂ ಜನಸೇವೆಯ ಬದ್ಧತೆ ಸದಾ ಸ್ಮರಣೀಯವಾಗಿರುತ್ತದೆ. ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿರುವ ಸೊಗಡು ಶಿವಣ್ಣ, ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದಿದ್ದಾರೆ.
– ಚಂದ್ರಚೂಡ ಕೆ.ಬಿ.
