ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ.ವೀರೇಂದ್ರಹೆಗ್ಗಡೆ ಯವರ ಮಾರ್ಗದರ್ಶನದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಜ್ಞಾನವಿಕಾಸ’ ಕಾರ್ಯಕ್ರಮದ ಅಧ್ಯಕ್ಷರಾಗಿ ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಸೇವಾ ಚಟುವಟಿಕೆಗಳಿಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಜಾಗತಿಕ ಮನ್ನಣೆ ಪಡೆದ ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಯಾದ ‘ಸ್ವಿಟ್ಟರ್ಲೆಂಡ್ನ ಪ್ರತಿಷ್ಠಿತ ಡನ್ಸ್ಟರ್ ಬ್ಯುಸಿನೆಸ್ ಸ್ಕೂಲ್’ ಇವರು ‘ಗೌರವ ಡಾಕ್ಟರೇಟ್’ ಪದವಿಯನ್ನು ನೀಡಿ ಗೌರವಿಸಿದರು.
ಡನ್ಸ್ಟರ್ ಬಿಸಿನೆಸ್ ಸ್ಕೂಲ್ ಇದೊಂದು ಅಂತಾರಾಷ್ಟ್ರೀಯ ಮಟ್ಟದ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿದೆ.ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ರಾಜ್ಯಮಟ್ಟದ ಪುನಶ್ಚತನಾ ಕಾರ್ಯಾಗಾರದಲ್ಲಿ ಡನ್ಸ್ಟರ್ ಬಿಸಿನೆಸ್ ಸ್ಕೂಲ್ನ ಅಧ್ಯಕ್ಷ ಫಿಲಿಪ್ ಥೆವೆನೋಟ್ರವರು ಆನ್ಲೈನ್ ಮೂಲಕ ಪದವಿಯನ್ನು ಪ್ರಕಟಿಸಿದರು. ಡನ್ಸ್ಟರ್ ಬಿಸಿನೆಸ್ ಸ್ಕೂಲ್ನ ಪರವಾಗಿ ಅವಿನಾಶ್ ಗುಪ್ತಾರವರು ಗೌರವ ಡಾಕ್ಟರೇಟ್ ಪದವಿಯನ್ನು ಧರ್ಮಸ್ಥಳದಲ್ಲಿ ಪ್ರಧಾನಿಸಿದರು.
ಗೌರವ ಡಾಕ್ಟರೇಟ್ ಪಡೆದ ಶ್ರೀಮತಿ ಹೇಮಾವತಿ ಹೆಗ್ಗಡೆರವರನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್.ಎಸ್.ಎಸ್,ಪ್ರಾದೇಶಿಕ ನಿರ್ದೇಶಕರಾದ ಎಂ.ಶೀನಪ್ಪ,ತುಮಕೂರು-1 ನಿರ್ದೇಶಕರಾದ ಸತೀಶ್ ಸುವರ್ಣ,ತಾಲ್ಲೋಕು ಯೋಜನಾಧಿಕಾರಿಗಳಾದ ಪಿ.ಬಿ.ಸಂದೇಶ್,ಪ್ರಭಾಕರ್ ರಾಮ್ ನಾಯಕ್,ತುಮಕೂರು ಜಿಲ್ಲೆಯ ಜನಜಾಗೃತಿ ಸಮಿತಿ ಪದಾಧಿಕಾರಿಗಳು,ಪತ್ರಕರ್ತರು ಸೇರಿದಂತೆ ಕಾರ್ಯಕರ್ತರು ಅಭಿನಂದಿಸಿದರು.
ವರದಿ : ಕೆ ಬಿ ಚಂದ್ರಚೂಡ್
