ಆಲೂರು, ಜುಲೈ 21: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಲೂರು ತಾಲ್ಲೂಕು ಘಟಕದ 2025–26ನೇ ಸಾಲಿನ ವಾರ್ಷಿಕ ಮಹಾಸಭೆ ಜುಲೈ 25, ಶನಿವಾರ ಮಧ್ಯಾಹ್ನ 12.30ಕ್ಕೆ ಆಲೂರು ಪಟ್ಟಣದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ.
ತಾಲ್ಲೂಕು ಅಧ್ಯಕ್ಷ ಡಿ.ಎಂ. ವರದರಾಜು ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ವಿವಿಧ ಇಲಾಖೆಗಳ ಜನಪ್ರತಿನಿಧಿಗಳು, ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಹೇಮಂತಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
