ಕೆ.ಆರ್.ಪೇಟೆ,ಜು.25: ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಓಡಾಡುತ್ತಿದ್ದ ಸರಳ ಸಜ್ಜನ ರಾಜಕಾರಣಿ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರ ಆದರ್ಶ ಗುಣಗಳು ಎಲ್ಲರಿಗೂ ಮಾದರಿಯಾಗಿವೆ. ಇವರ ಹೆಸರಿನಲ್ಲಿ ಪ್ರತಿಷ್ಠಾನ ಮಾಡಿ ಪ್ರತಿಭಾ ಪುರಸ್ಕಾರ ಮಾಡುತ್ತಿರುವುದು ಶ್ರೇಷ್ಠ ಕೆಲಸವಾಗಿದೆ ಎಂದು ನಾಡಿನ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಅಗ್ರಹಾರಬಾಚಹಳ್ಳಿ ಗೇಟ್ ಬೈಪಾಸ್ ರಸ್ತೆ ಬಳಿ ಇರುವ ಶ್ರೀಮತಿ ಜಯಮ್ಮ ರಾಮಸ್ವಾಮಿ ಸಮುದಾಯ ಭವನದಲ್ಲಿ ಮಂಡ್ಯದ ಗಾಂಧಿ ಹಾಗೂ ಮಾಜಿ ಸ್ಪೀಕರ್ ಕೆ. ಆರ್.ಪೇಟೆ ಕೃಷ್ಣ ಅವರ 86ನೇ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಸಾಧಕರಿಗೆ ಕೃಷ್ಣ ನಾಗರೀಕ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿ ಕೃಷ್ಣ ಹಾಗೂ ತಮ್ಮ ನಡುವಿನ ಸಂಬಂಧವನ್ನು ಕುರಿತು ಭಾವನಾತ್ಮಕವಾಗಿ ಮಾತನಾಡಿದರು. ಕಲುಷಿತ ಗೊಂಡಿರುವ ಇಂದಿನ ರಾಜಕಾರಣದಲ್ಲಿ ಕೆ.ಆರ್.ಪೇಟೆ ಕೃಷ್ಣ ಅವರಂತಹ ರಾಜಕಾರಣಿಗಳು ಅಪರೂಪವಾಗಿದ್ದಾರೆ.
ರಾಜಕೀಯವಾಗಿ ತಮ್ಮ ಜೀವನದಲ್ಲಿ ಸರಳ, ಸಜ್ಜನ ಆದರ್ಶ ಗುಣಗಳು ಹಾಗೂ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದ ಕೃಷ್ಣ ತಮ್ಮ ಸರಳತೆ ಹಾಗೂ ಮೌಲ್ಯಗಳಿಂದಾಗಿ ಮಂಡ್ಯದ ಗಾಂಧೀ ಎಂದೇ ಹೆಸರು ಗಳಿಸಿದ್ದರು. ನಾನು ಮತ್ತು ಕೃಷ್ಣ ಒಟ್ಟಿಗೆ ವಕೀಲಿ ವೃತ್ತಿಯನ್ನು ಮೈಸೂರಿನಲ್ಲಿ ನಡೆಸುತ್ತಿದ್ದೆವು. ವಕೀಲಿ ವೃತ್ತಿಯಲ್ಲಿ ಕೃಷ್ಣ ನನಗೆ ಜೂನಿಯರ್, ಸದಾ ಬಸ್ಸಿನಲ್ಲಿಯೇ ಪ್ರಯಾಣ ಮಾಡುತ್ತಿದ್ದ ಕೃಷ್ಣ ಸ್ವಂತಕ್ಕೆ ಒಂದು ಕಾರನ್ನೂ ಕೂಡ ಕೊಂಡುಕೊಂಡಿರಲಿಲ್ಲ. ಕೃಷ್ಣ ತಮ್ಮ ಜೀವನದುದ್ದಕ್ಕೂ ಸರಳತೆ, ಸಜ್ಜನಿಕೆ ಹಾಗೂ ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡಿದ್ದರು. ಇಂದಿನ ರಾಜಕಾರಣದಲ್ಲಿ ಕೃಷ್ಣ ಅವರಂತಹ ಸರಳ ಸಜ್ಹನ ರಾಜಕಾರಣಿಗಳು ಸಿಗುವುದು ಬಹಳ ಕಷ್ಟ, ನಾನು ಮತ್ತು ಕೃಷ್ಣ ಹಣ ಖರ್ಚು ಮಾಡದೇ ಗೆದ್ದು ಬಂದು ರಾಜಕಾರಣ ಮಾಡುತ್ತಿದ್ದೆವು, ಜನರೇ ನಮ್ಮ ಚುನಾವಣೆಗೆ ಹಣ ಖರ್ಚು ಮಾಡಿ ನಮ್ಮನ್ನು ಗೆಲ್ಲಿಸುತ್ತಿದ್ದರು. ಆದರೆ ಇಂದಿನ ರಾಜಕಾರಣವೇ ಬೇರೆಯಾಗಿದೆ.

ದುಡ್ಡಿಲ್ಲದಿದ್ದರೆ ಚುನಾವಣೆಯಲ್ಲಿ ಗೆಲ್ಲುವುದೇ ಕಷ್ಟವಾಗಿದೆ ಹಾಗಾಗಿ ನಾನೂ ಸಹ 2028ಕ್ಕೆ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದೇನೆ ಆದರೆ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು. ಕೆ. ಆರ್.ಪೇಟೆಯ ಜನರು ಕೃಷ್ಣ ಅವರ ಜನಪರ ಕಾಳಜಿ ಹಾಗೂ ಸರಳತೆಯನ್ನು ಮೆಚ್ಚಿ ಎಂದೂ ಅವರನ್ನು ಬೇಸರದಿಂದ ನೋಡಿರಲಿಲ್ಲ, ಜನರು ಕೃಷ್ಣ ಅವರು ಇನ್ನೂ ರಾಜಕಾರಣದಲ್ಲಿ ಅಧಿಕಾರದಲ್ಲಿ ಇರಲು ಬಯಸುತ್ತಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಮೌಲ್ಯಗಳನ್ನು ಉಳಿಸಲು ಕೃಷ್ಣ ಅವರು ಇನ್ನಷ್ಟು ವರ್ಷಗಳ ಕಾಲ ಬದುಕಿರಬೇಕಿತ್ತು ಎಂದರು. ಕೃಷ್ಣ ಅವರ ಹೆಸರಿನಲ್ಲಿ ಸಮಾಜದ ವಿವಿಧ ಸ್ತರಗಳಲ್ಲಿ ಕೆಲಸ ಮಾಡಿರುವ ಸಾಧಕರಿಗೆ ಕೃಷ್ಣ ಪುರಸ್ಕಾರ ಪ್ರಶಸ್ತಿ ನೀಡುತ್ತಿರುವುದು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಕೃಷ್ಣ ಅವರ ನೆನಪಿಗಾಗಿ ಕೆ.ಆರ್.ಪೇಟೆ ಪಟ್ಟಣದಲ್ಲಿ ಗಾಂಧಿ ಭವನ ನಿರ್ಮಿಸಲು ಬೇಕಾದ ಅಗತ್ಯವಾದ ಜಾಗವನ್ನು ಸರ್ಕಾರದ ಗಮನಕ್ಕೆ ತಂದು ಕೊಡಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ಮಗ ಯತಿಂದ್ರನೇ ಈಗ ರಾಜ್ಯ ಸರ್ಕಾರದಲ್ಲಿ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವನ್ನಾಗಿದ್ದೇನೆ. ಕೃಷ್ಣ ನೆನಪಿಗಾಗಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ನಿವೇಶನ ಹಾಗೂ ಅನುಧಾನ ಕೊಡಿಸಲು ಸರ್ವ ಪ್ರಯತ್ನ ಮಾಡುತ್ತೇನೆ. ಮುಖ್ಯಮಂತ್ರಿ ಡಿ.ಕೆ.ಶಿವಕಿಮಾರ್ ಅವರಿಗೂ ಪತ್ರ ಬರೆಯುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ರಾಜ್ಯದ ಮಾಜಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಭ್ರಷ್ಟ ವ್ಯವಸ್ಥೆಯೊಂದಿಗೆ ಎಂದಿಗೂ ರಾಜಿಯಾಗದ ಕೃಷ್ಣ ರಾಜಕೀಯ ರಂಗದಲ್ಲಿ ಬೆಳ್ಳಿಚುಕ್ಕಿಯಂತೆ ಪ್ರಜ್ವಲಿಸುತ್ತಿದ್ದಾರೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಬೈಗೂಡಿಸಿಕೊಂಡು ನುಡಿದಂತೆ ಸರಳವಾಗಿ ಜೀವನ ನಡೆಸಿ ಎಲ್ಲರಿಗೂ ಮಾದರಿಯಾಗಿರುವ ಕೃಷ್ಣ ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಿ ಜನಪರವಾದ ಕೆಲಸ ಕಾರ್ಯಗಳನ್ನು ಮಾಡಲು ಮುಂದಾಗಿರುವುದು ಇಡೀ ನಾಗರಿಕ ಸಮಾಜವೇ ಮೆಚ್ಚುವ ಸಂಗತಿಯಾಗಿದೆ ಎಂದು ಹೇಳಿದರು. .ಆರ್.ಪೇಟೆ ಕೃಷ್ಣ ಪ್ರತಿಷ್ಠಾನದ ಅಧ್ಯಕ್ಷ ಗೂಡೆ ಹೊಸಹಳ್ಳಿ ಜವರಾಯಿಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರು ಹಾಗೂ ಪುಸ್ತಕ ಸಂಗ್ರಹಗಾರರಾದ ಪಾಂಡವಪುರದ ಪುಸ್ತಕ ಮನೆ ಅಂಕೇಗೌಡ, ಸಾಹಿತಿಗಳು ಹಾಗೂ ಶೂದ್ರಶಕ್ತಿ ಪತ್ರಿಕಾ ಸಂಪಾದಕರಾದ ಬಿ.ಆರ್. ರಾಮೇಗೌಡ, ತಾಲೂಕಿನಲ್ಲಿ ಅತಿ ಹೆಚ್ಚು ಹಾಲು ಸರಬರಾಜು ಮಾಡುತ್ತಿರುವ ಪ್ರಗತಿಪರ ರೈತ ಮಹಿಳೆ ಪವಿತ್ರ ಹೆಮ್ಮೆನಹಳ್ಳಿ, ಐ.ಎ.ಎಸ್. ಉತ್ತೀರ್ಣ ಹೊಂದಿರುವ ಡಾ.ಮುತ್ತೇಶ್ ಗೌಡರ ತಂದೆ ಶಿವರಾಂ ದಂಪತಿಗಳಿಗೆ ಕೃಷ್ಣ ನಾಗರೀಕ ಪುರಸ್ಕಾರ ನೀಡಿ ಸಿದ್ದರಾಮಯ್ಯ ಅವರು ಸನ್ಮಾನಿಸಿ ಗೌರವಿಸಿದರು.

ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು, ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಕೃಷ್ಣ ಅವರ ಧರ್ಮಪತ್ನಿ ಇಂದ್ರಮ್ಮ ಕೃಷ್ಣ, ಮಾಜಿ ಶಾಸಕರಾದ ಬಿ.ಪ್ರಕಾಶ್, ಕೆ.ಬಿ.ಚಂದ್ರಶೇಖರ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಎಲ್.ದೇವರಾಜು, ರಾಜ್ಯ ಆರ್ಟಿಓ ಅಧಿಕಾರಿಗಳ ಸಂಘದ ಅಧ್ಯಕ್ಷ ಆರ್.ಟಿ.ಓ. ಮಲ್ಲಿಕಾರ್ಜುನ್ , ಕೆಯುಐಡಿಎಫ್.ಸಿ ನಿಗಮದ ಮಾಜಿ ಅಧ್ಯಕ್ಷ ಮತ್ತಿಘಟ್ಟ ಕೃಷ್ಣಮೂರ್ತಿ ಮಂಡ್ಯ ಮೂಡಾ ಮಾಜಿ ಅಧ್ಯಕ್ಷ ಕೆ.ಶ್ರೀನಿವಾಸ್ ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್, ಜಿ.ಪಂ.ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ಎಲ್.ದೇವರಾಜು, ಕೊಡಗಹಳ್ಳಿ ಮಂಜೇಗೌಡ, ಹೆಚ್.ಡಿ. ಭೋಜೇಗೌಡ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ ಗೌಡ, ನಾಟನಹಳ್ಳಿ, ಗಂಗಾಧರ್, ಅಂಚಿ ಸಣ್ಣಸ್ವಾಮೀಗೌಡ, ಸಂತೇಬಾಚಹಳ್ಳಿ ನಾಗರಾಜು, ಕತ್ತರಘಟ್ಟ ವಾಸು, ಆರ್.ಎಸ್.ಶಿವರಾಮೇಗೌಡ, ಹೆಮ್ಮನಹಳ್ಳಿ ರಮೇಶ್, ಕೆ.ಟಿ.ಚಂದ್ರೇಗೌಡ, ಮನ್ ಮುಲ್ ನಿರ್ದೇಶಕರಾದ ಡಾಲುರವಿ, ಎಂ.ಬಿ.ಹರೀಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್. ಅಂಬರೀಶ್, ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಲದ ನಿರ್ದೇಶಕ ಎಸ್ಎಲ್ ಮೋಹನ್, ಕರ್ನಾಟಕ ಕೈಗಾರಿಕಾ ಸರಬರಾಜು ಮಾರಾಟ ಮಹಾಮಂಡಲದ ಅಧ್ಯಕ್ಷ ಬಸ್ ಸಂತೋಷ್ ಕುಮಾರ್, ಪಿ.ಎಲ್.ಡಿ ಬ್ಯಾಂಕ್ ಉಪಾಧ್ಯಕ್ಷ ಲಕ್ಷ್ಮೀಪುರ ಚಂದ್ರೇಗೌಡ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಟಿ.ಎನ್.ದಿವಾಕರ್, ಮಹಿಳಾ ಹೋರಾಟಗಾರ್ತಿ ಮಂಜುಳಾ ಚನ್ನಕೇಶವ ಐಚನಹಳ್ಳಿ ಶಿವಣ್ಣ, ಕೆ.ಟಿ.ಚಂದ್ರೇಗೌಡ, ಕತ್ತರಘಟ್ಟ ವಾಸು, ಹೆಮ್ಮನಹಳ್ಳಿ ರಮೇಶ್, ಹಾಗೂ ಕೆ.ಆರ್.ಪೇಟೆ ಕೃಷ್ಣ ಪ್ರತಿಷ್ಠಾನದ ಎಲ್ಲಾ ಪದಾಧಿಕಾರಿಗಳು, ಮಾಜಿ ಸ್ಪೀಕರ್ ಕೃಷ್ಣ ಅಭಿಮಾನಿಗಳು ಹಾಗೂ ಮಾಜಿ ಸಿಎಂ. ಸಿದ್ದರಾಮಯ್ಯ ಅಭಿಮಾನಿಗಳು ಸೇರಿದಂತೆ ಸಾವಿರಾರು ಮಂದಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ಡಾಲುರವಿ, ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಶೀಳನೆರೆ ಅಂಬರೀಶ್, ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಲದ ನಿರ್ದೇಶಕ ಎಸ್ಎಲ್ ಮೋಹನ್, ಕೈಗಾರಿಕಾ ಮಾರಾಟ ಮಹಾಮಂಡಲದ ಅಧ್ಯಕ್ಷ ಬಸ್ ಸಂತೋಷ್ ಕುಮಾರ್, ತಾಲೋಕು ಮಹಿಳಾ ಹೋರಾಟಗಾರ್ತಿ, ಮಂಜುಳಾ ಚನ್ನಕೇಶವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಐಚನಹಳ್ಳಿ ಶಿವಣ್ಣ ಅವರಿಗೆ ಕೃಷ್ಣ ಸಾಧಕ ರತ್ನ ಪ್ರಶಸ್ತಿ ಗೌರವಿಸಲಾಯಿತು .
ಕಾರ್ಯಕ್ರಮಕ್ಕೂ ಮುನ್ನ ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ನೇತೃತ್ವದಲ್ಲಿ ಕೈಗೋನಹಳ್ಳಿ ಗ್ರಾಮದ ಬಳಿ ಮಾಜಿ ಸಿಂ ಸಿದ್ದರಾಮಯ್ಯ ಅವರಿಗೆ ಸನ್ಮಾನಿಸಿ ಗೌರವಿಸಿ ಅದ್ದೂರಿ ಸ್ವಾಗತ ಕೋರಿದರು.
ಕಾರ್ಯಕ್ರಮದ ನಂತರ ಮಾಜಿ ಸಿಎಂ. ಸಿದ್ದರಾಮಯ್ಯ ಅವರು ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಆರ್.ಟಿ.ಓ. ಮಲ್ಲಿಕಾರ್ಜುನ್ ಅವರ ನಿವಾಸಕ್ಕೆ ತೆರಳಿ ಕಾರ್ಯಕರ್ತರೊಂದಿಗೆ ಬೋಜನ ಸೇವಿಸಿ, ಆರ್.ಟಿ.ಓ. ಮಲ್ಲಿಕಾರ್ಜುನ್ ಅವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಿದ ಅಭಿನಂದನೆಯನ್ನು ಸ್ವೀಕರಿಸಿದರು. ಈ ವೇಳೆ ಕೆ.ಆರ್.ನಗರ ಶಾಸಕ ರವಿಶಂಕರ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಕೆ.ಆರ್.ರವೀಂದ್ರಬಾಬು ಸೇರಿದಂತೆ ಸಾವಿರಾರು ಮಂದಿ ಆರ್.ಟಿ.ಓ. ನಿವಾಸದಲ್ಲಿ ಮಧ್ಯಾಹ್ನ ಬೋಜನ ಸೇವಿಸಿದರು.
– ಶ್ರೀನಿವಾಸ್ ಆರ್.
