ತುಮಕೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ(ರಿ)ಬಿಸಿ ಟ್ರಸ್ಟ್ ವತಿಯಿಂದ ಗ್ರಾಮಾಂತರ ಯೋಜನಾ ಕಚೇರಿ ವ್ಯಾಪ್ತಿಯ ಕೋರ ವಲಯದ ಹರಿಯಪ್ಪನಹಳ್ಳಿ ಗ್ರಾಮದಲ್ಲಿ ಸಿರಿಧಾನ್ಯ ಬೇಸಾಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ದೇವರಾಜು ರವರು ಉದ್ಘಾಟಿಸಿ. ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ||ಡಿ.ವೀರೇಂದ್ರಹೆಗ್ಗಡೆಯವರು ಒಳ್ಳೆಯ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ನಾವೆಲ್ಲರೂ ಆಹಾರ ಬೆಳೆಗಳಾದ ಸಿರಿಧಾನ್ಯ ಬೆಳೆಯಲು ಮುಂದಾಗೋಣ ಎಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿ ರಘು ಕೊರಲೆ ರವರು ಇತ್ತೀಚೆಗೆ ಮಾರುಕಟ್ಟೆಯಲ್ಲಿ ಸಿರಿಧಾನ್ಯಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ರೈತರು ಅತ್ಯಂತ ಕಡಿಮೆ ನೀರಿನಲ್ಲಿ ಸಿರಿಧಾನ್ಯ ಬೆಳೆ ಬೆಳೆಯಬಹುದಾಗಿದೆ ಅಲ್ಲದೆ ಆರ್ಥಿಕ ಸುಧಾರಣೆಗೂ ಕೃಷಿ ಚಟುವಟಿಕೆಗೆ ಹೆಚ್ಚಿನ ಸಹಕಾರಿಯಾಗಲಿದೆ ಹಾಗೂ ಸಿರಿಧಾನ್ಯ ವ್ಯವಸಾಯದಲ್ಲಿ ಸಮಯಕ್ಕೆ ಸರಿಯಾಗಿ ಬಿತ್ತನೆ. ಕಳೆ ನಿರ್ವಹಣೆ. ಬೆಳೆ ಕಟಾವನ್ನು ಮಾಡುವುದು ಅವಶ್ಯಕವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಗತಿ ಪರ ಮಹಿಳಾ ಕೃಷಿಕಾರದ ಶ್ರೀಮತಿ ಪುಟ್ಟಲಕ್ಷ್ಮಮ್ಮ, ಕೃಷಿ ಮೇಲ್ವಿಚಾರಕ ರಾಘವೇಂದ್ರ.ಎನ್. ವಲಯ ಮೇಲ್ವಿಚಾರಕಿ ಶ್ರೀಮತಿ ಮಮತ, ಸೇವಾಪ್ರತಿನಿಧಿ ಶ್ರೀಮತಿ ಶಶಿಕಲಾ, ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘದ ಸದಸ್ಯರು ರೈತರು ಉಪಸ್ಥಿತರಿದ್ದರು.
– ಚಂದ್ರಚೂಡ ಕೆ.ಬಿ.
