ತುಮಕೂರು: ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ನ 75 ವರ್ಷಾಚರಣೆ ಅಂಗವಾಗಿ ನಗರದಲ್ಲಿ ಸೋಮವಾರ ಆರಂಭವಾದ ಆರು ದಿನಗಳ ಯೋನೆಕ್ಸ್-ಸನ್ರೈಸ್ರಾಜ್ಯ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಅಂಡರ್-11 ಮತ್ತು ಅಂಡರ್-13 ವಿಭಾಗಗಳ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಶಾಸಕ ಜಿ.ಬಿ. ಜ್ಯೋತಿಗಣೇಶ್, ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಕುಮಾರ್ ಬಂಗಾರಪ್ಪ ಅವರು ಬ್ಯಾಡ್ಮಿಂಟನ್ ಆಡುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಸ್ವಾಮೀಜಿ, ಮಕ್ಕಳನ್ನು ಕೇವಲ ಓದಿಗೆ ಸೀಮಿತಗೊಳಿಸಬೇಡಿ, ಅವರು ಕ್ರೀಡಾಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಪೋಷಕರು ಪ್ರೋತ್ಸಾಹ ನೀಡಬೇಕು.ಇಲ್ಲಿ ಸೇರಿರುವ 11ರಿಂದ 13 ವರ್ಷದ ಮಕ್ಕಳ ಮುಖದಲ್ಲಿ ಉತ್ಸಾಹದ ಚಿಲುಮೆ ಉಕ್ಕುತ್ತಿದೆ.ಇಂತಹ ಮಕ್ಕಳಿಗೆ ಸರಿಯಾದ ತರಬೇತಿ ನೀಡಿದರೆ ಅವರು ದೊಡ್ಡ ಸಾಧನೆ ಮಾಡುವುದರಲ್ಲಿ ಸಂದೇಹವಿಲ್ಲ ಎಂದರು.
ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ತುಮಕೂರು ನಗರ ಕ್ರೀಡಾಪುಟಗಳು, ಕ್ರೀಡಾಪ್ರೇಮಿಗಳಿಗೆ ಹೆಸರಾಗಿದೆ.ದೊಡ್ಡ ಮಟ್ಟದ ಹಲವಾರು ಪಂದ್ಯಾವಳಿಗಳು ನಡೆದಿವೆ. ಈ ಬಾರಿ ರಾಜ್ಯಮಟ್ಟದ ಪ್ರತಿಷ್ಠಿತ ಬ್ಯಾಡ್ಮಿಂಟನ್ಟೂರ್ನಿ ನಡೆಯುತ್ತಿರುವುದು ಅಭಿಮಾನದ ವಿಚಾರ. ಈ ಪಂದ್ಯಾವಳಿ ಮೂಲಕ ರಾಷ್ಟç, ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯ ಬ್ಯಾಡ್ಮಿಂಟನ್ ಪಟುಗಳು ಹೊರಹೊಮ್ಮಲಿ.ನಗರದ ಕ್ರೀಡಾಪ್ರೇಮಿಗಳು ಆರು ದಿನಗಳ ಕಾಲ ನಡೆಯುವ ಪಂದ್ಯಾವಳಿ ವೀಕ್ಷಿಸಿ ಸಂಭ್ರಮಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷಕುಮಾರ್ ಬಂಗಾರಪ್ಪ ಮಾತನಾಡಿ, ಈ ಟೂರ್ನಮೆಂಟ್ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ನಗರದಲ್ಲಿ 640 ಆಟಗಾರರು ನೋಂದಣಿ ಮಾಡಿದ್ದಾರೆ.ರಾಜ್ಯದ ಅನೇಕ ಪ್ರತಿಭಾವಂತ ಬ್ಯಾಡ್ಮಿಂಟನ್ ಆಟಗಾರರು ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಮುಂಬರುವ ಒಲಂಪಿಕ್ ಗುರಿ ಇಟ್ಟುಕೊಂಡು ಪ್ರತಿಭಾನ್ವಿತ ಬ್ಯಾಡ್ಮಿಂಟನ್ ಆಟಗಾರರನ್ನು ಗುರುತಿಸಲು, ಸಿದ್ಧಪಡಿಸಲು ಈ ಟೂರ್ನಮೆಂಟ್ ಉತ್ತಮ ವೇದಿಕೆ ಆಗಲಿದೆ ಎಂದು ಹೇಳಿದರು.
ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ವಿ.ಮುರಳಿಧರ್, ಖಜಾಂಚಿ ನಿಶ್ಚಿತಾ, ತುಮಕೂರು ಬ್ಯಾಡ್ಮಿಂಟನ್ ಅಕಾಡೆಮಿ ಅಧ್ಯಕ್ಷ ಪಿ.ಪ್ರವೀಣ್, ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಗೌರವ ಕಾರ್ಯದರ್ಶಿ ವಿ.ಮುರಳಿಧರ್, ಸಂಯೋಜಕರಾದ ನಿಶಾಂತ್, ಗುರುಪ್ರಸಾದ್, ಉದ್ಯಮಿಗಳಾದಅಜಯ್ಕುಮಾರ್, ಎಂ. ನಾಗರಾಜು, ಟಿ.ವಿ. ವೆಂಕಟಸ್ವಾಮಿ,ಊರುಕೆರೆ ಪುರುಷೋತ್ತಮ್, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ಎ.ಎನ್.ಪ್ರಭಾಕರ್ ಮೊದಲಾದವರು ಭಾಗವಹಿಸಿದ್ದರು.
– ಕೆ.ಬಿ.ಚಂದ್ರಚೂಡ
