ಚನ್ನರಾಯಪಟ್ಟಣ: ಪ್ರತಿವರ್ಷದಂತೆ ಈ ವರ್ಷವೂ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಬೆಲಸಿಂದ ಶ್ರೀವನದಲ್ಲಿ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮವನ್ನು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಎನ್ ಬಾಲಕೃಷ್ಣರವರು ರಾಜ್ಯ ಮಟ್ಟದ ಹಾಗೂ ಜಿಲ್ಲೆ ಮಟ್ಟದ ದಿನ ಪತ್ರಿಕೆಗಳ ಅನಾವರಣ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಪತ್ರಕರ್ತರಿಗೆ ನಿವೇಶನ ಮಾಡುವ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯದ್ಯಕ್ಷರಾದ ತಗಡೂರು ಶಿವಾನಂದ್ ಮಾತನಾಡಿ ಎಲ್ಲಾ ಪತ್ರಕರ್ತರಿಗೂ ಹಂತ ಹಂತವಾಗಿ ಬಸ್ ಪಾಸ್ ಕೊಡಿಸಲಾಗುವುದು ಎಂದು ತಿಳಿಸಿದರು, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಮದನಗೌಡರವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಅಮೋಘ ಪ್ರಮೋದ್, ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಜೆ ಆರ್ ಕೆಂಚೇಗೌಡ, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್, ಜಿಲ್ಲಾ ನಿರ್ದೇಶಕರಾದ ಬಿ ಸಿ ಚನ್ನೇಗೌಡ, ತಾಲೂಕು ಅಧ್ಯಕ್ಷರಾದ ದಯಾನಂದ್, ಉಪಾಧ್ಯಕ್ಷರಾದ ಪುಟ್ಟರಾಜು, ನಂದನ್ ಪುಟ್ಟಣ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಸಹ ಕಾರ್ಯದರ್ಶಿ ಶ್ರೀ ನಾಗೇಂದ್ರ, ಜಯಕುಮಾರ್, ಖಜಾಂಚಿ ನಾಗೇಶ್, ನಿರ್ದೇಶಕರುಗಳಾದ ಸಿದ್ದರಾಜು, ಜಯರಾಮ್, ಪಾಂಡುರಂಗ, ನಟೇಶ್, ಕಸಾಪ ಅಧ್ಯಕ್ಷರಾದ ಎಚ್ ಎಲ್ ಲೋಕೇಶ್, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಬಿಎಂಆರ್ ಮಂಜುನಾಥ್, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಎಲ್ ಪಿ ಪ್ರಕಾಶ್, ಕತ್ತರಿಘಟ್ಟ ಮೆಳಿಯಮ್ಮ ಆಧ್ಯಾತ್ಮಿಕ ಕೇಂದ್ರದ ಮುಖ್ಯಸ್ಥರಾದ ಚಂದ್ರಶೇಖರ್ ಗುರೂಜಿಯವರು, ಜಿಲ್ಲಾ ಮತ್ತು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಹಾಜರಿದ್ದರು.
– ಮಂಜುನಾಥ್ ಐ ಕೆ
