ತುಮಕೂರು: ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಮತ್ತು ನಾಯಕತ್ವದ ಮೇಲೆ ಅಚಲ ನಂಬಿಕೆ ಇಟ್ಟು ಪಕ್ಷ ಸಂಘಟನೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ನಿಷ್ಠಾವಂತ ಕಾರ್ಯಕರ್ತ ಹಾಗೂ ಸಮರ್ಥ ಸಂಘಟಕ ಎಸ್.ಟಿ.ಶ್ರೀನಿವಾಸ್ ಅವರು ತುಮಕೂರು ಜಿಲ್ಲೆಯ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಪ್ರಮುಖ ಯುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.
2004ರಲ್ಲಿ ಬೆಂಗಳೂರು ನಗರ ಎನ್.ಎಸ್.ಯು.ಐ ಹಾಗೂ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಗೊಂಡು ರಾಜಕೀಯ ಯಾತ್ರೆ ಆರಂಭಿಸಿದ ಇವರು, 2004ರಿಂದ 2012ರವರೆಗೆ ಪಕ್ಷದ ವಿವಿಧ ಕಾರ್ಯಕ್ರಮಗಳು ಹಾಗೂ ಸದಸ್ಯತ್ವ ಅಭಿಯಾನಗಳಲ್ಲಿ ನಿರಂತರವಾಗಿ ಪಾಲ್ಗೊಂಡಿದ್ದಾರೆ.
2015ರಲ್ಲಿ ಅಧಿಕೃತವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು, 2018ರ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ವ್ಯಾಪಕ ಪ್ರಚಾರ ಹಾಗೂ ಕಾರ್ಯಕರ್ತರ ಸಮನ್ವಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
2019ರ `ಶಕ್ತಿ’ ಕಾಂಗ್ರೆಸ್ ನೋಂದಣಿ ಅಭಿಯಾನ, 2022ರ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’, 2023ರ ಪ್ರಜಾಧ್ವನಿ-ಪಂಚ ಗ್ಯಾರಂಟಿ ಪ್ರಚಾರ ಹಾಗೂ ‘ನಾ-ನಾಯಕಿ’ ಮಹಿಳಾ ಸಮಾವೇಶಗಳ ಯಶಸ್ಸಿಗೆ ಶ್ರಮಿಸಿದ್ದಾರೆ.
2024ರಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮತ್ತು ಯುವಕರನ್ನು ಪಕ್ಷದತ್ತ ಸೆಳೆಯುವಲ್ಲಿ ಸಕ್ರಿಯರಾಗಿದ್ದಾರೆ.
ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಗಳು:
ಜನಸ್ನೇಹಿ ಪೊಲೀಸ್ ಪ್ರಶಸ್ತಿ ಪ್ರಧಾನ, ಕನಕ ಜಯಂತಿ, ಅಂಬೇಡ್ಕರ್ ಜಯಂತಿ, ಕ್ರೀಡಾಕೂಟಗಳು, ನಾಟಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ವಿಶೇಷವಾಗಿ ಅಹಿಂದ ಜನಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಸಮುದಾಯಗಳ ಸಭೆಗಳ ಮೂಲಕ ಸಾರ್ವಜನಿಕ ಸಂಪರ್ಕವನ್ನು ಹೊಂದಿದ್ದಾರೆ.
“ಹುದ್ದೆಗಾಗಿ ಅಲ್ಲ, ಪಕ್ಷದ ಬಲವರ್ಧನೆಗೆ ನನ್ನ ಪಯಣ” ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್.ಟಿ.ಶ್ರೀನಿವಾಸ್ ಅವರು ತುಮಕೂರು ಜಿಲ್ಲಾ ಕಾಂಗ್ರೆಸ್ನಲ್ಲಿ ಪ್ರಬಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ.
-ಕೆ.ಬಿ. ಚಂದ್ರಚೂಡ
