ಹಾಸನ, ಜು.30: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ದಿವಂಗತ ಚೇನ್ನಮ್ಮ ದೇವೇಗೌಡ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ರಾಜ್ಯದ ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅವರು ಭಾಗವಹಿಸಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಿ.ಟಿ. ಕುಮಾರ್, ಸಹ ಕಾರ್ಯದರ್ಶಿ ಜಿ.ಆರ್. ಶ್ರೀನಿವಾಸ್, ಉದ್ಯಮಿ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಸನ ತಾಲ್ಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದು, ದಿವಂಗತ ಚೇನ್ನಮ್ಮ ದೇವೇಗೌಡ ಅವರ ಸಮಾಜಮುಖಿ ಜೀವನ, ಸರಳತೆ ಹಾಗೂ ಸೇವಾ ಮನೋಭಾವವನ್ನು ಸ್ಮರಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಈ ವೇಳೆ ದೇವೇಗೌಡ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ, ದಿವಂಗತ ಚೇನ್ನಮ್ಮ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಲಾಯಿತು.
– ಕುಮಾರಸ್ವಾಮಿ ಎಂ.ಎನ್.
