ಕೊರಟಗೆರೆ:- ವಿಶೇಷ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ಕೊರಟಗೆರೆ ಪುರಸಭೆ ವ್ಯಾಪ್ತಿಯಲ್ಲಿ ವೇಗವಾಗಿ ನಡೆಯುತ್ತಿದ್ದು, ಈಗಾಗಲೇ ಶೇ.80ರಷ್ಟು ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಉಮೇಶ್ ತಿಳಿಸಿದ್ದಾರೆ.
ವಾರ್ಡ್ವಾರು ಎಸ್ಐಆರ್ ಕಾರ್ಯವನ್ನು ಚುರುಕುಗೊಳಿಸುವ ಉದ್ದೇಶದಿಂದ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ಉಳಿದಿರುವ ಕಾರ್ಯವನ್ನು ಮುಂದಿನ 5ರಿಂದ 6 ದಿನಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಈ ಕಾರ್ಯದಲ್ಲಿ ಪುರಸಭೆಯ ಅಧಿಕಾರಿಗಳಾದ ವೇಣುಗೋಪಾಲ್, ಮಂಗಳಗೌರಮ್ಮ, ಶೈಲೂ, ನರಸಿಂಹಯ್ಯ ಸೇರಿದಂತೆ ಹಲವು ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿ ಮನೆಮನೆಗೆ ತೆರಳಿ ಮಾಹಿತಿ ಪರಿಶೀಲನೆ, ಅರ್ಜಿಗಳ ಪರಿಶೀಲನೆ ಹಾಗೂ ದಾಖಲೆಗಳ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದಾರೆ.

ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ ಮತ್ತು ದೋಷರಹಿತಗೊಳಿಸುವ ಉದ್ದೇಶದಿಂದ ಎಸ್ಐಆರ್ ಪ್ರಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿಯಂತೆ ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ ಸಿಬ್ಬಂದಿಗೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ, ಅನುಮಾನ ಅಥವಾ ಮಾಹಿತಿಯ ಅಗತ್ಯವಿದ್ದಲ್ಲಿ ಸಾರ್ವಜನಿಕರು ನೇರವಾಗಿ ಪುರಸಭೆ ಕಚೇರಿಯನ್ನು ಅಥವಾ ಮುಖ್ಯಾಧಿಕಾರಿ ಉಮೇಶ್ ಅವರನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ಸಮಯಮಿತಿಯೊಳಗೆ ಎಸ್ಐಆರ್ ಪ್ರಕ್ರಿಯೆಯನ್ನು ಶೇ.100ರಷ್ಟು ಪೂರ್ಣಗೊಳಿಸಲು ಪುರಸಭೆ ಆಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸಿಬ್ಬಂದಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇನ್ನೂ ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 08138295546 ಕರೆ ಮಾಡಿ ತಮ್ಮ ಸಮಸ್ಯೆಗಳನ್ನ ಪರಿಹರಿಸಿಕೊಳ್ಳಬಹುದು ಹಾಗೂ ಎಸ್ಐಆರ್ ಸಂಬಂಧ ಪಟ್ಟಂತೆ ಯಾವುದಾದರೂ ಸಮಸ್ಯೆ ಕಂಡು ಬಂದಲ್ಲಿ ಪರಿಹರಿಸಿಕೊಳ್ಳಬಹುದು ಎಂದು ಪುರಸಭೆ ಮುಖ್ಯ ಅಧಿಕಾರಿ ಮನವಿ ಮಾಡಿದ್ದಾರೆ.
– ಶ್ರೀನಿವಾಸ್ ಕೊರಟಗೆರೆ
