ಹಾಸನ: ವಿಶ್ವ ರೇಂಜರ್ ದಿನದ ಅಂಗವಾಗಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಹಾಸನ ಅರಣ್ಯ ಇಲಾಖೆಯಲ್ಲಿ ರೇಂಜ್ ಫಾರೆಸ್ಟ್ ಆಫೀಸರ್ (RFO) ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಶೈಲಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಲಬ್ ಅಧ್ಯಕ್ಷರಾದ ರೋ. ಕೆ.ಎಸ್. ಯೋಗೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯಾಧಿಕಾರಿಗಳು ಸಲ್ಲಿಸುತ್ತಿರುವ ಸೇವೆಯನ್ನು ಶ್ಲಾಘಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ RFO ಶ್ರೀಮತಿ ಶೈಲಾ ಅವರು, ಅರಣ್ಯವು ಪ್ರಕೃತಿಯ ಅಮೂಲ್ಯ ಸಂಪತ್ತಾಗಿದ್ದು, ಮುಂದಿನ ಪೀಳಿಗೆಗಾಗಿ ಪರಿಸರವನ್ನು ಸಂರಕ್ಷಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷ ರೋ. ಕೆ.ಎಸ್. ಯೋಗೇಶ್, ಉಪಾಧ್ಯಕ್ಷ ರೋ. ಯು.ಎಂ. ಬುದೇಶ್, ಖಜಾಂಚಿ ರೋ. ಶಶೀಂದ್ರನಾಥನ್, ಜಂಟಿ ಕಾರ್ಯದರ್ಶಿ ರೋ. ಎಸ್.ಸಿ. ರಾಜೇಶ್, ರೋ. ಶೈಲಾ, ರೋ. ರವಿನಾಯಕ್ ಹಾಗೂ ಕ್ಲಬ್ನ ಇತರ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
