ಹಾಸನ, ಆ. 4: ಜಿಲ್ಲಾ ವಕೀಲರ ಸಂಘ ಹಾಸನ, ರೋಟರಿ ಕ್ಲಬ್ ಆಫ್ ಹಾಸನ್ ಸನ್ರೈಸ್ ಹಾಗೂ ಸ್ವಾಸ್ಥ್ಯ ಹೆಲ್ತ್ ಬೆಂಗಳೂರು ಸಹಯೋಗದಲ್ಲಿ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ವಕೀಲರು ಮತ್ತು ಅವರ ಕುಟುಂಬ ಸದಸ್ಯರಿಗಾಗಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಶಿಬಿರದಲ್ಲಿ 300ಕ್ಕೂ ಹೆಚ್ಚು ವಕೀಲರು ಹಾಗೂ ಅವರ ಕುಟುಂಬ ಸದಸ್ಯರು ಭಾಗವಹಿಸಿ ವಿವಿಧ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳುವ ಮೂಲಕ ಶಿಬಿರದ ಪ್ರಯೋಜನ ಪಡೆದುಕೊಂಡರು. ಆರೋಗ್ಯ ಜಾಗೃತಿ ಮೂಡಿಸುವ ಜೊತೆಗೆ ಆರಂಭಿಕ ಹಂತದಲ್ಲಿಯೇ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ರೈಸ್ ಅಧ್ಯಕ್ಷ ರೋ. ಕೆ.ಎಸ್. ಯೋಗೇಶ್, ಜಂಟಿ ಕಾರ್ಯದರ್ಶಿ ರೋ. ಎಸ್.ಸಿ. ರಾಜೇಶ್, ಹಿರಿಯ ಸದಸ್ಯರಾದ ರೋ. ಎಂ.ಬಿ. ವಿಶ್ವನಾಥ್, ರೋ. ಎ.ಸಿ. ಗುರುಮೂರ್ತಿ, ರೋ. ಮಲ್ಲಿಕಾರ್ಜುನ ಸೇರಿದಂತೆ ಕ್ಲಬ್ನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಶಿಬಿರದ ಯಶಸ್ವಿಗೆ ಸಹಕರಿಸಿದ ವೈದ್ಯಕೀಯ ತಂಡ, ಸಂಘಟಕರು ಹಾಗೂ ಸಹಯೋಗಿಗಳಿಗೆ ರೋಟರಿ ಕ್ಲಬ್ ಆಫ್ ಹಾಸನ್ ಸನ್ರೈಸ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
