ಚನ್ನರಾಯಪಟ್ಟಣ: ಭಾರತೀಯ ಜನತಾ ಪಾರ್ಟಿಯ ಶ್ರವಣಬೆಳಗೊಳ ಮಂಡಲದ ವತಿಯಿಂದ ಮಾಸಿಕ ಸಭೆ ಹಾಗೂ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತ ಸಭೆಯನ್ನು ಮಂಡಲ ಅಧ್ಯಕ್ಷ ಪರಮ ಗಂಗಾಧರ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಸಭೆಯಲ್ಲಿ SIR ಪ್ರಕ್ರಿಯೆ, ಮತದಾರರ ಪಟ್ಟಿಯ ಪರಿಶೀಲನೆ, ಬೂತ್ ಮಟ್ಟದ ಸಂಘಟನೆ ಬಲಪಡಿಸುವುದು ಹಾಗೂ ಪಕ್ಷದ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ತಾಲೂಕಿನ ಎಲ್ಲ BLA-2 ಪದಾಧಿಕಾರಿಗಳಿಗೆ ಮತದಾರರ ಪಟ್ಟಿಯ ಪರಿಶೀಲನೆ ಮತ್ತು ಅಗತ್ಯ ತಿದ್ದುಪಡಿ ಪ್ರಕ್ರಿಯೆ ಕುರಿತು ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಹಲವು ಮಹಿಳೆಯರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ಮುಖಂಡರು ನೂತನ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿ, ಪಕ್ಷ ಸಂಘಟನೆಗೆ ಸಕ್ರಿಯವಾಗಿ ಕೈಜೋಡಿಸುವಂತೆ ಕರೆ ನೀಡಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಕುಮಾರ್, ಶ್ರವಣಬೆಳಗೊಳ ಮಂಡಲ ಉಸ್ತುವಾರಿ ಹಾಗೂ ಜಿಲ್ಲಾ ಉಪಾಧ್ಯಕ್ಷ ಗಂಗಾಧರ್, ಜಿಲ್ಲಾ ಉಪಾಧ್ಯಕ್ಷ ಹಾಗೂ ಮಂಡಲ ಪ್ರಭಾರಿ ನವಿಲೇ ಅಣ್ಣಪ್ಪ, ಮಂಡಲ SIR ಉಸ್ತುವಾರಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿತಾ ರುಕೇಶ್, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಸಿ.ಆರ್. ಚಿದಾನಂದ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗನ್ನಿ ವಿಶ್ವನಾಥ್ ಸಿ.ಆರ್. ಮತ್ತು ಮುಳ್ಕೆರೆ ಪ್ರಶಾಂತ್ ಉಪಸ್ಥಿತರಿದ್ದರು.
ಇವರೊಂದಿಗೆ ಮಂಡಲದ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಹಿರಿಯ ಮತ್ತು ಕಿರಿಯ ಮುಖಂಡರು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ತಾಲೂಕಿನ BLA-2 ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
– ಮಂಜುನಾಥ್ ಐ.ಕೆ.
