ಕೆ.ಆರ್.ಪೇಟೆ: ಆಗಸ್ಟ್ 15ರಂದು ನಡೆಯುವ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವ ಸಿದ್ದತಾ ಸಭೆಯು ಶಾಸಕ ಹೆಚ್.ಟಿ.ಮಂಜು ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಕೆಪಿಎಸ್ ಶಾಲಾ ಆವರಣದಿಂದ ಕ್ರೀಡಾಂಗಣದ ವರೆಗೆ ಸ್ತಬ್ದ ಚಿತ್ರಗಳು ಹಾಗೂ ಸ್ವಾತಂತ್ರ್ಯ ಕ್ಕಾಗಿ ಹೋರಾಟ ಮಾಡಿದ ಮಹನೀಯರ ಭಾವಚಿತ್ರವನ್ನು ಮೆರವಣಿಗೆ ಮೂಲಕ ತೆಗದುಕೊಂಡು ಹೋಗಿ ಗೌರವ ಸಲ್ಲಿಸಲು ತೀರ್ಮಾನಿಸಲಾಯಿತು. ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ಸಾಧಕರನ್ನು ಸನ್ಮಾನಿಸಿ ಗೌರವಿಸಲು ಶಾಸಕರು ತಾಲ್ಲೂಕು ಆಡಳಿತಕ್ಕೆ ಸೂಚನೆ ನೀಡಿದರು. ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಬೇಕು. ಗೈರುಹಾಜರಾಗುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆಯುವಂತೆ ಶಾಸಕ ಹೆಚ್.ಟಿ. ಮಂಜು ಅವರು ತಹಸೀಲ್ದಾರ್ ಶ್ರೇಯಸ್ ಅವರಿಗೆ ಸೂಚನೆ ನೀಡಿದರು.

ಎಲ್ಲಾ ಕಚೇರಿಗಳ ಮೇಲೆ ಕಡ್ಡಾಯವಾಗಿ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಹಾಕಿಸಬೇಕು. ತಳಿರು ತೋರಣ ಕಟ್ಟಿ ಕಚೇರಿಯನ್ನು ಸಿಂಗರಿಸಿ ಅಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಿ ನಂತರ ತಾಲ್ಲೂಕು ಆಡಳಿತವು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಸುವ ತಾಲ್ಲೂಕು ಮಟ್ಟದ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಬರಬೇಕು. ಎಲ್ಲಾ ಶಾಲಾ-ಕಾಲೇಜುಗಳಲ್ಲಿ, ಸರ್ಕಾರಿ ಬ್ಯಾಂಕುಗಳಲ್ಲಿ, ಸಹಕಾರ ಬ್ಯಾಂಕುಗಳಲ್ಲಿ ಕಡ್ಡಾಯವಾಗಿ ಆಚರಣೆ ಮಾಡಬೇಕು ಇದನ್ನು ಪಾಲಿಸದ ಸಂಸ್ಥೆಯ ವಿರುದ್ದ ಸೂಕ್ತ ಕ್ರಮಕ್ಕೆ ತಾಲ್ಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಅರ್ಥಪೂರ್ಣ ಸ್ವಾತಂತ್ರೋತ್ಸವಕ್ಕೆ ಹಲವು ಜವಾಬ್ದಾರಿಗಳನ್ನು ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಲಾಯಿತು.
ಸಭೆಯಲ್ಲಿ ತಹಸೀಲ್ದಾರ್ ಶ್ರೇಯಸ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ, ತಾ.ಪಂ. ಇಒ ಕೆ.ಸುಷ್ಮ, ಟಿಎಪಿಸಿಎಂಎಸ್ ಅಧ್ಯಕ್ಷ ಬಲದೇವ್, ತಾಲ್ಲೂಕು ಟಿಎಪಿಸಿಎಂಎಸ್ ಹಿರಿಯ ನಿರ್ದೇಶಕ ಮಲ್ಲೇನಹಳ್ಳಿ ಎಂ.ಮೋಹನ್, ವಕೀಲರಾದ ವಿ.ಎಸ್.ಧನಂಜಯ್ ಕುಮಾರ್, ಸಾಸಲು ಧನಂಜಯ, ಪಶುವೈದ್ಯ ಸಹಾಯಕ ನಿರ್ದೇಶಕ ಡಾ.ಹೆಚ್.ಎಸ್.ದೇವರಾಜು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಜಿತ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಡಾ.ಕೆ.ದಿವಾಕರ್, ಬಿಸಿಎಂ ಅಧಿಕಾರಿ ವೆಂಕಟೇಶ್, ನಿವೃತ್ತ ಯೋಧ ಸುಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
